ಬಲವಂತದ ಸೆಕ್ಸ್ ವಿಚ್ಛೇದನಕ್ಕೆ ಆಧಾರವಾಗಬಹುದು: ಹರ್ಯಾಣ ಹೈಕೋರ್ಟ್
ಒತ್ತಾಯ ಪೂರ್ವಕ ಸೆಕ್ಸ್ ವಿಚ್ಛೇದನಕ್ಕೆ ಆಧಾರವಾಗುತ್ತದೆ ಎಂದು ಹರ್ಯಾಣ ಹೈಕೋರ್ಟ್ ಹೇಳಿದೆ.

Published On :
ಹರ್ಯಾಣ: ಒತ್ತಾಯ ಪೂರ್ವಕ ಸೆಕ್ಸ್ ವಿಚ್ಛೇದನಕ್ಕೆ ಆಧಾರವಾಗುತ್ತದೆ ಎಂದು ಹರ್ಯಾಣ ಹೈಕೋರ್ಟ್ ಹೇಳಿದೆ.
ಕೇವಲ ಒತ್ತಾಯಪೂರ್ವಕ ಸೆಕ್ಸ್ ಅಷ್ಟೇ ಅಲ್ಲದೇ ಅಸಹಜ ಲೈಂಗಿಕ ಕ್ರಿಯೆಯಲ್ಲಿ ತೊಡಗುವಂತೆ ಪತ್ನಿಯನ್ನು ಒತ್ತಾಯ ಮಾಡುವುದೂ ಸಹ ವಿಚ್ಛೇದನಕ್ಕೆ ಆಧಾರವಾಗುತ್ತದೆ ಎಂದು ಕೋರ್ಟ್ ಹೇಳಿದೆ. ಪಂಜಾಬ್ ನ ಬಥಿಂಡಾ ಪ್ರಾಂತ್ಯದ ಮಹಿಳೆಯೊಬ್ಬರು ಅಸಹಜ ಲೈಂಗಿಕ ಕ್ರಿಯೆಯಲ್ಲಿ ತೊಡಗುವಂತೆ ತನ್ನ ಪತಿ ಒತ್ತಾಯ ಮಾಡುತ್ತಾರೆ, ಆದ್ದರಿಂದ ವಿಚ್ಛೇದನ ಬೇಕು ಎಂದು ಸ್ಥಳೀಯ ಕೋರ್ಟ್ ಮೊರೆ ಹೋಗಿದ್ದರು. ಆದರೆ ಇದಕ್ಕೆ ಸೂಕ್ತ ವೈದ್ಯಕೀಯ ದಾಖಲೆಗಳು ಹಾಗೂ ನಿರ್ದಿಷ್ಟ ಉದಾಹರಣೆಗಳನ್ನು ನೀಡಲಾಗಿಲ್ಲ ಎಂದು ಸ್ಥಳೀಯ ಕೋರ್ಟ್ ಅರ್ಜಿಯನ್ನು ತಿರಸ್ಕರಿಸಿತ್ತು.
ಸ್ಥಳೀಯ ಕೋರ್ಟ್ ನ ತೀರ್ಮಾನವನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯದ ಎಂಎಂ ಎಸ್ ಬೇಡಿ ಹಾಗೂ ಹರಿ ಪಾಲ್ ವರ್ಮಾ ಅವರ ವಿಭಾಗೀಯ ಪೀಠ, ಅರ್ಜಿದಾರರ ಮನವಿಯನ್ನು ಸ್ಥಳೀಯ ನ್ಯಾಯಾಲಯ ತಿರಸ್ಕರಿಸಿದ್ದು ಸೂಕ್ತವಲ್ಲ ಎಂದು ಹೇಳಿದೆ.
ಅಸಹಜ ಲೈಂಗಿಕ ಕ್ರಿಯೆಯಲ್ಲಿ ತೊಡಗುವಂತೆ ಒತ್ತಯಿಸುವುದು ವಿಚ್ಛೇದನ ಕೇಳುವುದಕ್ಕೆ ಅರ್ಹವಾದ ಅಂಶ ಎಂದು ಹೈಕೋರ್ಟ್ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


