ಪ್ರಧಾನಿ ಮೋದಿ ಹತ್ಯೆಗೆ ನಿತಿನ್ ಗಡ್ಕರಿಯಿಂದ ಸಂಚು: ಶೆಹ್ಲಾ ರಶೀದ್ ಟ್ವೀಟ್ ವಿವಾದ
ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿಯ ಹತ್ಯೆಯಂತೆ ಮಾವೋವಾದಿಗಳು ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂಬ...

Published On :
ನವದೆಹಲಿ: ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿಯ ಹತ್ಯೆಯಂತೆ ಮಾವೋವಾದಿಗಳು ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂಬ ಆಘಾತಕಾರಿ ಸುದ್ದಿ ಬಹಿರಂಗದ ಬೆನ್ನಲ್ಲೇ ಶೆಹ್ಲಾ ರಶೀದ್ ಎಂಬುವರು ಆರ್ಎಸ್ಎಸ್ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮೋದಿ ಅವರನ್ನು ಹತ್ಯೆಗೈಯಲು ಸಂಚು ರೂಪಿಸಿದ್ದಾರೆ ಎಂದು ಟ್ವೀಟ್ ಮಾಡಿದ್ದು ಇದೀಗ ವಿವಾದಕ್ಕೆ ಕಾರಣವಾಗಿದೆ.
ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಹಕ್ಕುಗಳ ಕಾರ್ಯಕರ್ತೆ ಶೆಹ್ಲಾ ರಶೀದ್ ಕೇಂದ್ರ ಸಚಿವ ನಿತಿನ್ ಗಡ್ಕರಿ ವಿರುದ್ಧ ಗಂಭೀರ ಆರೋಪ ಮಾಡಿದ್ದು ಇದಕ್ಕೆ ಪ್ರತಿಯಾಗಿ ನಿತಿನ್ ಗಡ್ಕರಿ ಶೆಹ್ಲಾ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಸಿದ್ದಾರೆ.
ಶೆಹ್ಲಾ ತಮ್ಮ ಟ್ವೀಟರ್ ನಲ್ಲಿ ಆರ್ಎಸ್ಎಸ್ ಮತ್ತು ಗಡ್ಕರಿ ಅವರನ್ನು ನೋಡಿದರೆ ಮೋದಿ ಅವರನ್ನು ಕೊಲ್ಲಲು ಸಂಚು ರೂಪಿಸಿದವರಂತೆ ಕಾಣುತ್ತಾರೆ. ನಂತರ ಅದನ್ನು ಮುಸ್ಲಿಂ ಹಾಗೂ ಕಮ್ಯೂನಿಸ್ಟ್ ಗಳ ಮೇಲೆ ಹೊರಿಸಿ, ಬಳಿಕ ಮುಸ್ಲಿಂರನ್ನು ರಾಜೀವ್ ಗಾಂಧಿ ಹತ್ಯೆ ಮಾದರಿಯಲ್ಲಿ ಗಲ್ಲಿಗೇರಿಸುವ ತಂತ್ರ ಮಾಡಲಾಗುತ್ತಿದೆ ಎಂದು ಟ್ವೀಟಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿRSSTwitterಟ್ವೀಟರ್Nitin Gadkariನಿತಿನ್ ಗಡ್ಕರಿಆರ್ಎಸ್ಎಸ್Shehla Rashidಶೆಹ್ಲಾ ರಶೀದ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


