ಪ್ರಣಬ್ ಮುಖರ್ಜಿ ಮತ್ತೆ ಸಕ್ರಿಯ ರಾಜಕಾರಣಕ್ಕೆ ಬರಲ್ಲ: ಪುತ್ರಿ ಶರ್ಮಿಷ್ಠಾ
2019ರ ಲೋಕಸಭೆ ಚುನಾವಣೆಯಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ...

Published On :
ನವದೆಹಲಿ: 2019ರ ಲೋಕಸಭೆ ಚುನಾವಣೆಯಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಲು ಆರ್ ಎಸ್ ಎಸ್ ಚಿಂತನೆ ನಡೆಸಿದೆ ಎಂದು ಶಿವಸೇನಾ ಮುಖಂಡ ಸಂಜಯ್ ರಾವುತ್ ಆರೋಪಿಸಿದ ಬೆನ್ನಲ್ಲೇ ನಮ್ಮ ತಂದೆ ಮತ್ತೆ ಸಕ್ರಿಯ ರಾಜಕಾರಣ ಪ್ರವೇಶಿಸುವುದಿಲ್ಲ ಎಂದು ಪ್ರಣಬ್ ಪುತ್ರಿ ಶರ್ಮಿಷ್ಠಾ ಅವರು ಸ್ಪಷ್ಟಪಡಿಸಿದ್ದಾರೆ.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ನಿರೀಕ್ಷಿತ ಸ್ಥಾನಗಳು ಬರದೇ ಇದ್ದಲ್ಲಿ ಪ್ರಣಬ್ ಮುಖರ್ಜಿ ಅವರನ್ನು ಪ್ರಧಾನಿಯಾಗಿ ಆರೆಸ್ಸೆಸ್ ಬಿಂಬಿಸುವ ಸಾಧ್ಯತೆಯಿದೆ ಎಂದು ಸಂಜಯ್ ರಾವುತ್ ಹೇಳಿದ್ದರು.
'ಭಾರತದ ರಾಷ್ಟ್ರಪತಿಯಾಗಿ ನಿವೃತ್ತರಾದ ಬಳಿಕ ನನ್ನ ತಂದೆಯವರು ಮತ್ತೆ ಸಕ್ರಿಯ ರಾಜಕಾರಣಕ್ಕೆ ಬರುವುದಿಲ್ಲ. ಇದನ್ನು ನೆನಪಿಟ್ಟುಕೊಳ್ಳಿ ಮಿ. ರಾವುತ್' ಎಂದು ಶರ್ಮಿಷ್ಠಾ ಮುಖರ್ಜಿ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


