ಉಗ್ರರ ಹೆಡೆ ಮುರಿ ಕಟ್ಟಿದ ಭಾರತೀಯ ಸೇನೆ, ಗಡಿದಾಟಲು ಯತ್ನಿಸಿದ 6 ಉಗ್ರರ ಸಾವು!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತದ ಗಡಿಯೊಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನ ಮೂಲದ 6 ಉಗ್ರರನ್ನು ಭಾರತೀಯ ಸೇನಾಪಡೆಗಳು ಹೊಡೆದುರುಳಿಸಿವೆ.

Published On :
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತದ ಗಡಿಯೊಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನ ಮೂಲದ 6 ಉಗ್ರರನ್ನು ಭಾರತೀಯ ಸೇನಾಪಡೆಗಳು ಹೊಡೆದುರುಳಿಸಿವೆ.
ಕಾಶ್ಮೀರದ ಕುಪ್ವಾರ ಜಿಲ್ಲೆಯ ಕೆರಾನ್ ಸೆಕ್ಟರ್ ನಲ್ಲಿ ಇಂದು ಮುಂಜಾನೆ ಪಾಕಿಸ್ತಾನ ಗಡಿಯಿಂದ ಮೂವರು ಉಗ್ರರು ಭಾರತದ ಗಡಿಯೊಳಗೆ ನುಸುಳುತ್ತಿದ್ದರು. ಈ ವೇಳೆ ಗಸ್ತು ತಿರುಗುತ್ತಿದ್ದ ಸೇನೆಯ ಸಿಬ್ಬಂದಿ ಇದನ್ನು ಗಮನಿಸಿ ಕೂಡಲೇ ಗುಂಡು ಹಾರಿಸಿದ್ದಾರೆ. ಉಗ್ರರು ಕೂಡ ಪ್ರತಿದಾಳಿ ಮಾಡಿದ್ದು, ಕೂಡಲೇ ಯೋಧರು ಸುತ್ತುವರೆದು ಗುಂಡಿನ ದಾಳಿ ಆರಂಭಿಸಿದ್ದಾರೆ.
ಯೋಧರ ಗುಂಡಿನ ದಾಳಿಯಲ್ಲಿ 6 ಉಗ್ರರು ಹತರಾಗಿದ್ದು, ಘಟನಾ ಪ್ರದೇಶದಲ್ಲಿ ಮತ್ತಷ್ಟು ಉಗ್ರರು ಅಡಗಿರುವ ಕುರಿತು ಶಂಕೆ ಇದ್ದು ಉಗ್ರ ನಿಗ್ರಹ ಕಾರ್ಯಾಚರಣೆ ಆರಂಭಿಸಲಾಗಿದೆ. ಈಗಲೂ ಗುಂಡಿನ ಚಕಮಕಿ ನಡೆಯುತ್ತಿದ್ದು, ಗುಂಡಿನ ದಾಳಿ ವೇಳೆ ಸೈನಿಕರಿಗೆ ಗಾಯಗಳಾದ ಕುರಿತು ಮಾಹಿತಿ ಲಭ್ಯವಾಗಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian Armyಉಗ್ರರುಶ್ರೀನಗರSrinagarಜಮ್ಮು ಮತ್ತು ಕಾಶ್ಮೀರJammu and KashmirterroristKupwaraಭಾರತೀಯ ಸೇನೆInfiltrationಒಳ ನುಸುಳುವಿಕೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


