ಪ್ರಧಾನಿ ಮೋದಿಗೆ ಹತ್ಯೆಗೆ ಸಂಚು ಕೇವಲ ಅನುಕಂಪದ ಮತಗಳಿಕೆಗಾಗಿ ಬಿಜೆಪಿ ಯತ್ನ: ಶರದ್ ಪವಾರ್
ಮಾವೋವಾದಿಗಳು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೊಲ್ಲಲು ಯತ್ನಿಸಿದ್ದಾರೆ ಎಂಬುದು ಕೇವಲ ಬಿಜೆಪಿಯ ಉಪಾಯವಾಗಿದ್ದು, ಅನುಕಂಪದ ಆಧಾರದ ಮೇಲೆ ತನ್ನ ಮತ ಬ್ಯಾಂಕ್ ತುಂಬಿಸಿಕೊಳ್ಳಲು ಬಿಜೆಪಿ ಯತ್ನಿಸುತ್ತಿದೆ ಎಂದು ಎನ್ ಸಿಪಿ ಮುಖಂಡ ಶರದ್ ಪವಾರ್ ಹೇಳಿದ್ದಾರೆ.

Published On :
ಪುಣೆ: ಮಾವೋವಾದಿಗಳು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೊಲ್ಲಲು ಯತ್ನಿಸಿದ್ದಾರೆ ಎಂಬುದು ಕೇವಲ ಬಿಜೆಪಿಯ ಉಪಾಯವಾಗಿದ್ದು, ಅನುಕಂಪದ ಆಧಾರದ ಮೇಲೆ ತನ್ನ ಮತ ಬ್ಯಾಂಕ್ ತುಂಬಿಸಿಕೊಳ್ಳಲು ಬಿಜೆಪಿ ಯತ್ನಿಸುತ್ತಿದೆ ಎಂದು ಎನ್ ಸಿಪಿ ಮುಖಂಡ ಶರದ್ ಪವಾರ್ ಹೇಳಿದ್ದಾರೆ.
ಮಹಾರಾಷ್ಟ್ರದ ಪುಣೆಯಲ್ಲಿ ಪಕ್ಷದ ಕಾರ್ಯಕ್ರಮದಲ್ಲಿ ಮಾತನಾಡಿದ ಅವಪು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಸರ್ಕಾರದ ವಿರುದ್ಧ ಹಲ್ಲಾಬೋಲ್ ಜಾಗೃತಿ ಅಭಿಯಾನವನ್ನು ಆರಂಭಿಸಿದರು. ಈ ವೇಳೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾವೋವಾದಿಗಳು ಕೊಲ್ಲಲು ಯತ್ನಿಸಿದ್ದಾರೆ ಎಂಬ ಸುದ್ದಿಯಿಂದ ಜನರ ಅನುಕಂಪ ಗಿಟ್ಟಿಸಿ ಅದನ್ನು ಮತವಾಗಿ ಪರಿವರ್ತನೆ ಮಾಡಿಕೊಳ್ಳುವದು ಬಿಜೆಪಿ ಸಂಚು ಎಂದು ಆರೋಪಿಸಿದ್ದಾರೆ.
ಯಾವುದೇ ಕಾರಣಕ್ಕೂ ಬಿಜೆಪಿ ಅನುಕಂಪದ ಸಂಚಿಗೆ ಜನರರು ಸಿಲುಕಬಾರದು ಎಂದು ಮನವಿ ಮಾಡಿದರು. ಒಂದು ವೇಳೆ ಪ್ರಧಾನಿ ನರೇಂದ್ರ ಮೋದಿ ಹತ್ಯೆ ಕುರಿತಂತೆ ಸಂಚು ರೂಪಿಸಿದ್ದರೂ ಅದು ತೀರಾ ಗೌಪ್ಯ ವಿಚಾರ. ಯಾವುದೇ ಕಾರಣಕ್ಕೂ ಅದು ಮಾಧ್ಯಮಗಳಲ್ಲಿ ಪ್ರಸಾರವಾಗಬಾರದು. ಹೀಗಿದ್ದೂ ಈ ವಿಚಾರ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಇದರ ಹಿಂದೆ ಖಂಡಿತಾ ಕೇಂದ್ರ ಸರ್ಕಾರ ಅನುಕಂಪದ ಆಧಾರದಲ್ಲಿ ಮತ ಪಡೆಯುವ ಸಂಚಿದೆ ಎಂದು ಹೇಳಿದರು.
ಅಂತೆಯೇ ಪ್ರಗತಿಪರರನ್ನು ಮತ್ತು ವಿಚಾರವಾದಿಗಳನ್ನು ಕೇಂದ್ರ ಸರ್ಕಾರ ನಕ್ಸಲರು ಎಂಬಂತೆ ಬಿಂಬಿಸುತ್ತಿದೆ. ಎಲ್ಗಾರ್ ಪರಿಷದ್ ಆಯೋಜನೆ ಮಾಡಿದವರನ್ನು ಕೇಂದ್ರ ಸರ್ಕಾರ ನಕ್ಸಲ್ ಚಟುವಟಿಕೆ ಪ್ರಕರಣದಲ್ಲಿ ಬಂಧಿಸಿದೆ. ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಯಾರ ಕೈವಾಡವಿದೆ ಎಂದು ಎಲ್ಲರಿಗೂ ತಿಳಿದಿದೆ. ಆದರೆ ಕೇಂದ್ರ ಸರ್ಕಾರ ಮಾತ್ರ ತನ್ನ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಅಮಾಯಕರನ್ನು ಬಂಧಿಸುತ್ತಿದೆ ಎಂದು ಹೇಳಿದರು. ಇದೇ ವೇಳೆ ಇವಿಎಂಗಳು ಕುರಿತು ಮಾತನಾಡಿದ ಪವಾರ್, ಕೇಂದ್ರ ಸರ್ಕಾರ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಇವಿಎಂಗಳಲ್ಲಿ ಈ ಹಿಂದೆಂದೂ ಕಾಣದಷ್ಟು ಮಟ್ಟಿಗೆ ತಾಂತ್ರಿಕ ದೋಷಗಳು ಎದುರಾಗುತ್ತಿವೆ. ಇವಿಎಂಗಳ ವಿವಾದದಲ್ಲಿ ಖಂಡಿತಾ ಕೇಂದ್ರದ ಪಾತ್ರವಿದೆ ಎಂದು ಗಂಭೀರ ಆರೋಪ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿNCPSharad Pawarಶರದ್ ಪವಾರ್MaoistsPUNEಪುಣೆಎನ್ ಸಿಪಿPM Modi Assassinationಪ್ರಧಾನಿ ಮೋದಿ ಹತ್ಯೆ ಸಂಚು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


