ದೇಶ

ಅಜಾತಶತ್ರು, ಮಾಜಿ ಪ್ರಧಾನಿ ವಾಜಪೇಯಿ ಏಮ್ಸ್ ಆಸ್ಪತ್ರೆಗೆ ದಾಖಲು

ಜಗ ಮೆಚ್ಚಿದ ನಾಯಕ, ಭಾರತ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರನ್ನು ರಾಜಧಾನಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿರುವುದಾಗಿ ಸೋಮವಾರ ಮೂಲಗಳು ತಿಳಿಸಿವೆ...

ಅಜಾತಶತ್ರು, ಮಾಜಿ ಪ್ರಧಾನಿ ವಾಜಪೇಯಿ ಏಮ್ಸ್ ಆಸ್ಪತ್ರೆಗೆ ದಾಖಲು
Former PM Atal Bihari Vajpayee
Published On :
ನವದೆಹಲಿ: ಜಗ ಮೆಚ್ಚಿದ ನಾಯಕ, ಭಾರತ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರನ್ನು ರಾಜಧಾನಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿರುವುದಾಗಿ ಸೋಮವಾರ ಮೂಲಗಳು ತಿಳಿಸಿವೆ. 
ಬಹು ದಿನಗಳಿಂದ ವಾಜಪೇಯಿಯವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಅವರನ್ನು ದೆಹಲಿಯ ಪ್ರತಿಷ್ಠಿತ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಿರುವುದಾಗಿ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. 
ದೈನಂದಿನ ತಪಾಸಣೆಗಾಗಿ ವಾಜಪೇಯಿಯವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಡಾ.ರಣ್'ದೀಪ್ ಗುಲಾರಿಯಾ ಅವರು ವಾಜಪೇಯಿಯವರ ಆರೋಗ್ಯದ ಬಗ್ಗೆ ನಿಗಾವಹಿಸಿದ್ದಾರೆಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.