ದೇಶ

ರಾಜಕೀಯ ಆಶ್ರಯ ಕೋರಿ ನೀರವ್ ಮೋದಿ ಇಂಗ್ಲೆಂಡಿಗೆ ಪಲಾಯನ: ವರದಿ

ಶತಕೋಟಿ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಭಾಗಿಯಾದ ಆರೋಪ ಹೊತ್ತು ತಲೆಮರೆಸಿಕೊಂಡಿರುವ ನೀರವ್ ಮೋದಿ ಇಂಗ್ಲೆಂಡಿನಲ್ಲಿ ರಾಜಕೀಯ ಆಶ್ರಯದಲ್ಲಿ ಇದ್ದಾರೆ

ರಾಜಕೀಯ ಆಶ್ರಯ ಕೋರಿ ನೀರವ್ ಮೋದಿ ಇಂಗ್ಲೆಂಡಿಗೆ ಪಲಾಯನ: ವರದಿ
ನೀರವ್ ಮೋದಿ(ಸಂಗ್ರಹ ಚಿತ್ರ)
Published On :

ನವದೆಹಲಿ: ಶತಕೋಟಿ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಭಾಗಿಯಾದ ಆರೋಪ ಹೊತ್ತು ತಲೆಮರೆಸಿಕೊಂಡಿರುವ ನೀರವ್ ಮೋದಿ ಇಂಗ್ಲೆಂಡಿನಲ್ಲಿ ರಾಜಕೀಯ ಆಶ್ರಯದಲ್ಲಿ ಇದ್ದಾರೆ ಎಂದು ಫೈನಾನ್ಷಿಯಲ್ ಟೈಮ್ಸ್ ವರದಿ ಮಾಡಿದೆ. ಇದರ ಹಿಂದೆ ಭಾರತೀಯ ಮತ್ತು ಇಂಗ್ಲೆಂಡಿನ ಅಧಿಕಾರಿಗಳ ಕೈವಾಡವಿದೆ ಎಂದು ಪತ್ರಿಕೆ ವರದಿ ತಿಳಿಸಿದೆ.

ಆದರೆ ವೈಯಕ್ತಿಕ ಕೇಸುಗಳಿಗೆ ಸಂಬಂಧಪಟ್ಟಂತೆ ಯಾವುದೇ ಮಾಹಿತಿ ಒದಗಿಸುವುದಿಲ್ಲ ಎಂದು ಬ್ರಿಟನ್ ನ ಗೃಹ ಕಚೇರಿ ತಿಳಿಸಿದೆ. ಆದರೆ ಹೇಳಿಕೆ ಪಡೆಯಲು ನೀರವ್ ಮೋದಿ ರಾಯ್ಟರ್ಸ್ ಸುದ್ದಿ ಸಂಸ್ಥೆಯ ಸಂಪರ್ಕಕ್ಕೆ ಸಿಗಲಿಲ್ಲ ಎಂದು ಪತ್ರಿಕೆ ವರದಿ ಮಾಡಿದೆ.

ಭಾರತದ ಎರಡನೇ ಅತಿ ದೊಡ್ಡ ಸಾರ್ವಜನಿಕ ಉದ್ಯಮ ಬ್ಯಾಂಕು ಪಂಜಾಬ್ ನ್ಯಾಷನಲ್ ಬ್ಯಾಂಕು ಈ ವರ್ಷದ ಆರಂಭದಲ್ಲಿ ಇಬ್ಬರು ಖ್ಯಾತ ಉದ್ಯಮಿಗಳಾದ ನೀರವ್ ಮೋದಿ ಮತ್ತು ಅವರ ಮಾವ ಮೆಹುಲ್ ಚೋಕ್ಸಿ ಬೇರೆ ಭಾರತೀಯ ಬ್ಯಾಂಕುಗಳ ಸಾಗರೋತ್ತರ ಶಾಖೆಗಳ ಮೂಲಕ ಸುಮಾರು 2.2 ಶತಕೋಟಿ ಸಾಲವನ್ನು ಅಕ್ರಮವಾಗಿ ಪಡೆದಿದ್ದರು ಎಂಬ ಸ್ಫೋಟಕ ಮಾಹಿತಿ ಇಡೀ ಭಾರತೀಯ ಬ್ಯಾಂಕು ಉದ್ಯಮ ರಂಗವನ್ನು ತಲ್ಲಣಗೊಳಿಸಿತ್ತು.

ಈ ಪ್ರಕರಣ ಬೆಳಕಿಗೆ ಬಂದ ಬಳಿಕ ನೀರವ್ ಮೋದಿ ಲಂಡನ್ ಗೆ ಪಲಾಯನ ಮಾಡಿದ್ದು ಅಲ್ಲಿ ರಾಜಕೀಯ ಮುಖಂಡರ ಪ್ರಭಾವದಡಿಯಲ್ಲಿ ಆಶ್ರಯ ಪಡೆದಿದ್ದಾರೆ ಎನ್ನಲಾಗುತ್ತಿದೆ.

ಈ ಕುರಿತು ಫೈನಾನ್ಷಿಯಲ್ ಟೈಮ್ಸ್ ಭಾರತದ ವಿದೇಶಾಂಗ ವ್ಯವಹಾರಗಳ ಅಧಿಕಾರಿಗಳನ್ನು ಸಂಪರ್ಕಿಸಿದಾಗ, ನೀರವ್ ಮೋದಿಗೆ ಗಡೀಪಾರು ಆದೇಶ ತರುವ ಮುನ್ನ ದೇಶದ ಜಾರಿ ನಿರ್ದೇಶನಾಲಯ ಸಂಸ್ಥೆಗಳು ತಮ್ಮನ್ನು ಸಂಪರ್ಕಿಸುವುದಕ್ಕೆ ಕಾಯುತ್ತಿದ್ದೇವೆ ಎಂದಿದ್ದಾರೆ. ಆದರೆ ರಾಯ್ಟರ್ಸ್ ಸುದ್ದಿ ಸಂಸ್ಥೆಗೆ ವಿದೇಶಾಂಗ ವ್ಯವಹಾರಗಳ ಇಲಾಖೆ ಪ್ರತಿಕ್ರಿಯೆ ನೀಡಿಲ್ಲ.

ಭಾರತ ಈಗಾಗಲೇ ಮತ್ತೊಬ್ಬ ಉದ್ಯಮಿ ವಿಜಯ್ ಮಲ್ಯರನ್ನು ಗಡೀಪಾರು ಮಾಡಲು ಸಿದ್ದತೆ ನಡೆಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.