ದೇಶ

ಏರ್ ಸೆಲ್- ಮ್ಯಾಕ್ಸಿಸ್ ಹಗರಣ: ಇಡಿಯಿಂದ ಸತತ ಆರು ಗಂಟೆ ಚಿದಂಬರಂ ವಿಚಾರಣೆ

ಏರ್ ಸೆಲ್-ಮ್ಯಾಕ್ಸಿಸ್ ಹಗರಣಕ್ಕೆ ಸಂಬಂಧಿಸಿದಂತೆ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ...

ಏರ್ ಸೆಲ್- ಮ್ಯಾಕ್ಸಿಸ್ ಹಗರಣ: ಇಡಿಯಿಂದ ಸತತ ಆರು ಗಂಟೆ ಚಿದಂಬರಂ ವಿಚಾರಣೆ
ಪಿ ಚಿದಂಬರಂ
Published On :
ನವದೆಹಲಿ: ಏರ್ ಸೆಲ್-ಮ್ಯಾಕ್ಸಿಸ್ ಹಗರಣಕ್ಕೆ ಸಂಬಂಧಿಸಿದಂತೆ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರನ್ನು ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಮಂಗಳವಾರ ಸತತ ಆರು ಗಂಟೆಗಳ ಕಾಲ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಗೆ ಇಡಿ ಕಚೇರಿಗೆ ಆಗಮಿಸಿದ್ದ ಚಿದಂಬರಂ ಅವರನ್ನು ಸಂಜೆ 5 ಗಂಟೆಯವರೆಗೆ ಅಧಿಕಾರಿಗಳು ಮಾಜಿ ಹಣಕಾಸು ಸಚಿವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
ಏರ್ ಸೆಲ್ - ಮ್ಯಾಕ್ಸಿಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಇಂದು ಮತ್ತೊಂದು ಸುತ್ತಿನ ಪ್ರಶ್ನೆಗಳನ್ನು ಕೇಳಿತು. ನನ್ನ ವಿರುದ್ಧ ಯಾವುದೇ ಎಫ್ ಐಆರ್ ಮತ್ತು ಆರೋಪ ದಾಖಲಾಗಿಲ್ಲ ಎಂಬುದನ್ನು ನಾನು ನನೆಪಿಸಿಕೊಳ್ಳುತ್ತೇನೆ ಎಂದು ವಿಚಾರಣೆ ಬಳಿಕ ಚಿದಂಬರಂ ಟ್ವೀಟ್ ಮಾಡಿದ್ದಾರೆ.
ತನಿಖಾ ಅಧಿಕಾರಿಗಳು ಕಳೆದ ಬಾರಿಯಂತೆ ಈ ಬಾರಿಯೂ ಅಕ್ರಮ ಹಣ ವಹಿವಾಟು ತಡೆ ಕಾಯ್ದೆ ಅಡಿ ಚಿದಂಬರಂ ಅವರ ಹೇಳಿಕೆಯನ್ನು ಪಡೆದಿದ್ದಾರೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಜೂನ್ 5ರಂದು ಸಹ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚಿದಂಬರಂ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು. ಅಲ್ಲದೆ ಇತ್ತೀಚಿಗೆ ಇದೇ ಪ್ರಕರಣದಲ್ಲಿ ಚಿದಂಬರಂ ಅವರನ್ನು ಸಿಬಿಐ ಅಧಿಕಾರಿಗಳು ಸಹ ವಿಚಾರಣೆಗೆ ಒಳಪಡಿಸಿದ್ದರು. 
ಏರ್ ಸೆಲ್-ಮ್ಯಾಕ್ಸಿಸ್ ಹಣ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಪಿ. ಚಿದಂಬರಂ ಅವರು, ಪಟಿಯಾಲ ಹೌಸ್ ಕೋರ್ಟ್ ನಿಂದ ಈಗಾಗಲೇ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದಾರೆ.
2ಜಿ ತರಂಗಾಂತರ ಹಂಚಿಕೆ ಹಗರಣದಲ್ಲಿ ವಿದೇಶಿ ಹೂಡಿಕೆ ಉತ್ತೇಜನ ಮಂಡಳಿಯು (ಎಫ್‌ಐಪಿಬಿ) ಏರ್ ಸೆಲ್‌ನಲ್ಲಿ ಹೂಡಿಕೆ ಮಾಡಲು ಎಂ/ಎಸ್ ಗ್ಲೋಬಲ್ ಕಮ್ಯುನಿಕೇಷನ್ ಹೋಲ್ಡಿಂಗ್ ಸರ್ವೀಸಸ್ ಲಿಮಿಟೆಡ್‌ಗೆ ಅನುಮೋದನೆ ನೀಡಿತ್ತು.
2006ರಲ್ಲಿ ಚಿದಂಬರಂ ಅವರು ತಮ್ಮ ಅಧಿಕಾರದ ವ್ಯಾಪ್ತಿ ಮೀರಿ ಎಫ್‌ಐಪಿಬಿ ಅನುಮೋದನೆ ನೀಡಿದ್ದರು. ಆದರೆ ಅವರಿಗೆ 600 ಕೋಟಿವರೆಗಿನ ಯೋಜನಾ ಪ್ರಸ್ತಾವನೆಗಳಿಗೆ ಮಾತ್ರ ಅನುಮೋದನೆ ನೀಡಲು ಅಧಿಕಾರವಿತ್ತು ಎಂದು ಇಡಿ ಆರೋಪಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.