ದೇಶ

ಮಾಜಿ ಪ್ರಧಾನಿಯನ್ನು ಗೌರವಿಸುವುದು ಕಾಂಗ್ರೆಸ್ ಸಂಸ್ಕೃತಿ: ವಾಜಪೇಯಿ ಬಗ್ಗೆ ರಾಹುಲ್

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಈ ದೇಶಕ್ಕಾಗಿ ಕೆಲಸ ಮಾಡಿದ್ದಾರೆ. ಅಂತಹ ಒಬ್ಬ ಮಾಜಿ...

ಮಾಜಿ ಪ್ರಧಾನಿಯನ್ನು ಗೌರವಿಸುವುದು ಕಾಂಗ್ರೆಸ್ ಸಂಸ್ಕೃತಿ: ವಾಜಪೇಯಿ ಬಗ್ಗೆ ರಾಹುಲ್
ರಾಹುಲ್ ಗಾಂಧಿ
Published On :
ಮುಂಬೈ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಈ ದೇಶಕ್ಕಾಗಿ ಕೆಲಸ ಮಾಡಿದ್ದಾರೆ. ಅಂತಹ ಒಬ್ಬ ಮಾಜಿ ಪ್ರಧಾನಿಯನ್ನು ಗೌರವಿಸುವುದು ಕಾಂಗ್ರೆಸ್ ನ ಸಂಸ್ಕೃತಿ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಂಗಳವಾರ ಹೇಳಿದ್ದಾರೆ.
ಇಂದು ಮುಂಬೈನ ಗೋರೆಗಾಂವನಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ನಾವು ವಾಜಪೇಯಿ ವಿರುದ್ಧ ಸ್ಪರ್ಧಿಸಿದ್ದೇವೆ. ಆದರೆ ಈಗ ಅವರ ಅನಾರೋಗ್ಯಕ್ಕಿಡಾಗಿದ್ದು, ಕಾಂಗ್ರೆಸ್ ನ ಒಬ್ಬ ಸೈನಿಕನಾಗಿ ನಾನು ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಪ್ರಧಾನಿಯ ಆರೋಗ್ಯ ವಿಚಾರಿಸಿದೆ ಎಂದರು.
ಬಿಜೆಪಿ ಹಿರಿಯ ನಾಯಕ ಎಲ್ ಕೆ ಆಡ್ವಾಣಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ರಾಜಕೀಯ ಗುರು. ಆದರೆ ಹಲವು ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ ಆಡ್ವಾಣಿ ಅವರಿಗೆ ಅಗೌರವ ತೋರಿದ್ದನ್ನು ನಾನು ನೋಡಿದ್ದೇನೆ. ಆ ಬಗ್ಗೆ ನನಗೆ ತುಂಬಾ ಬೇಸರ ಇದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷ ಪ್ರಧಾನಿ ಮೋದಿಗಿಂತ ಆಡ್ವಾಣಿಜಿ ಅವರಿಗೆ ಹೆಚ್ಚು ಗೌರವ ನೀಡುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಹೇಳಿದ್ದಾರೆ.
ನಿನ್ನೆ ರಾಹುಲ್ ಗಾಂಧಿ ಅವರು ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ವಾಜಪೇಯಿ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.