ದೇಶ

'ಪಾಪಿ'ಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ, ಭಾರತೀಯ ಸೇನೆಯ ನಾಲ್ಕು ಯೋಧರು ಹುತಾತ್ಮ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ರಂಜಾನ್ ಕದನ ವಿರಾಮ ಹೊರತಾಗಿಯೂ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘನೆ ಮಾಡಿದ ಪರಿಣಾಮ ಭಾರತೀಯ ಸೇನೆಯ ನಾಲ್ಕು ಯೋಧರು ಹುತಾತ್ಮರಾಗಿದ್ದಾರೆ.

'ಪಾಪಿ'ಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ, ಭಾರತೀಯ ಸೇನೆಯ ನಾಲ್ಕು ಯೋಧರು ಹುತಾತ್ಮ
ಸಂಗ್ರಹ ಚಿತ್ರ
Published On :
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ರಂಜಾನ್ ಕದನ ವಿರಾಮ ಹೊರತಾಗಿಯೂ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘನೆ ಮಾಡಿದ ಪರಿಣಾಮ ಭಾರತೀಯ ಸೇನೆಯ ನಾಲ್ಕು ಯೋಧರು ಹುತಾತ್ಮರಾಗಿದ್ದಾರೆ.
ಕಾಶ್ಮೀರದ ಸಾಂಬಾ ಜಿಲ್ಲೆಯ ಚಂಬಲಿಯಾಲ್ ಸೆಕ್ಟರ್ ನಲ್ಲಿನ ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನಿ ಯೋಧರು ಗುಂಡಿನ ದಾಳಿ ನಡೆಸಿದ್ದಾರೆ. ಅಪ್ರಚೋದಿತ ಮತ್ತು ದಿಢೀರ್ ದಾಳಿಯ ಪರಿಣಾಮ ಕರ್ತವ್ಯ ನಿರ್ವಹಣೆಯಲ್ಲಿದ್ದ ನಾಲ್ಕು ಮಂದಿ ಯೋಧರು ಸಾವನ್ನಪ್ಪಿದ್ದಾರೆ. ಈ ನಾಲ್ಕು ಯೋಧರ ಪೈಕಿ ಓರ್ವ ಅಸಿಸ್ಟೆಂಟ್ ಕಮಾಂಡೆಟ್ ಕೂಡ ಇದ್ದರು ಎಂದು ಸೇನಾ ಮೂಲಗಳು ತಿಳಿಸಿವೆ.
ಕಳೆದ ವಾರವಷ್ಟೇ ಭಾರತ ಮತ್ತು ಪಾಕಿಸ್ತಾನ ರಂಜಾನ್ ನಿಮಿತ್ತ ಕದನ ವಿರಾಮಕ್ಕೆ ಒಪ್ಪಿಗೆ ನೀಡಿತ್ತು. ಆದರೆ ಪದೇ ಪದೇ ತಮ್ಮ ಮಾತು ತಪ್ಪುತಿರುವ ಪಾಕಿಸ್ತಾನ ಭಾರತೀಯ ಪೋಸ್ಟ್ ಗಳ ಮೇಲೆ ದಾಳಿ ಮಾಡುತ್ತಿದೆ. ಇನ್ನು ಪಾಕಿಸ್ತಾನ ಸೈನಿಕರ ದಾಳಿಗೆ ಭಾರತ ಕೂಡ ಕಠಿಣ ತಿರುಗೇಟು ನೀಡುತ್ತಿದ್ದು, ದಾಳಿ ನಡೆಸುತ್ತಿರುವ ಪಾಕಿಸ್ತಾನಿ ಸೈನಿಕರನ್ನು ಗುರಿಯಾಗಿಸಿಕೊಂಡು ಪ್ರತಿದಾಳಿ ನಡೆಸಲಾಗುತ್ತಿದೆ. 
ಘಟನೆಯಲ್ಲಿ 4 ಮಂದಿ ಯೋಧರು ಸಾವನ್ನಪ್ಪಿದ್ದರೆ, 3 ಮಂದಿ ಯೋಧರು ಗಾಯಗೊಂಡಿದ್ದಾರೆ. ಗಾಯಾಳುಗಳುನ್ನು ಸಾಂಬಾದಲ್ಲಿರುವ ಸೇನಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಬಿಎಸ್ ಎಫ್ ಇನ್ಸ್ ಪೆಕ್ಟರ್ ಜನರಲ್ ರಾಮ್ ಅವತಾರ್ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.