ರಾಹುಲ್ ಗಾಂಧಿ ಇಫ್ತಾರ್ ಕೂಟದಲ್ಲಿ ಪ್ರಣಬ್ ಸೇರಿ ಹಲವು ಗಣ್ಯರು ಭಾಗಿ
ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾದ ನಂತರ ಆಯೋಜಿಸಿದ್ದ ಮೊದಲ ಇಫ್ತಾರ್ ಕೂಟದಲ್ಲಿ...

Published On :
ನವದೆಹಲಿ: ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾದ ನಂತರ ಆಯೋಜಿಸಿದ್ದ ಮೊದಲ ಇಫ್ತಾರ್ ಕೂಟದಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.
ರಂಜಾನ್ ನಿಮಿತ್ತ ಇಂದು ದೆಹಲಿಯ ತಾಜ್ ಪ್ಯಾಲೆಸ್ ಹೋಟೆಲ್ ನಲ್ಲಿ ಏರ್ಪಡಿಸಿದ್ದ ಇಫ್ತಾರ್ ಕೂಟದಲ್ಲಿ ಮಾಜಿ ರಾಷ್ಟ್ರಪತಿಗಳಾದ ಪ್ರಣಬ್ ಮುಖರ್ಜಿ, ಪ್ರತಿಭಾ ಪಾಟೀಲ್, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ನಾಯಕರುಗಳಾದ ಮಲ್ಲಿಕಾರ್ಜುನ್ ಖರ್ಗೆ, ಗುಲಾಂ ನಬಿ ಆಜಾದ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.
ಸಿಪಿಎಂ ನಾಯಕ ಸೀತಾರಾಂ ಯೆಚೂರಿ, ಶರದ್ ಯಾದವ್, ಪ್ರಫುಲ್ ಪಟೇಲ್, ಸತೀಶ್ ಮಿಶ್ರಾ, ರಾಮಗೋಪಾಲ್ ಯಾದವ್, ಕನಿಮೋಳಿ, ಒಮರ್ ಅಬ್ದುಲ್ಲಾ ಹಾಗೂ ಡಿ ರಾಜಾ ಸೇರಿದಂತೆ ಪ್ರತಿಪಕ್ಷಗಳ ಹಲವು ನಾಯಕರು ಭಾಗವಹಿಸಿದ್ದರು.
ಪ್ರಣಬ್ ಮುಖಜಿರ್ಜಿ ಅವರು ಆರ್ ಎಸ್ ಎಸ್ ಕೇಂದ್ರ ಕಚೇರಿಯಲ್ಲಿ ಭಾಷಣ ಮಾಡಿದ ಬಳಿಕ ಅವರನ್ನು ಇಫ್ತಾರ್ ಕೂಟದಿಂದ ಹೊರಗಿಡಲಾಗುವುದು ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಪ್ರಣಬ್ ಅವರು ರಾಹುಲ್ ಗಾಂಧಿ ಅವರ ಪಕ್ಕದಲ್ಲಿಯೇ ಕುಳಿತಿದ್ದು ವಿಶೇಷವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


