ಕೆಲ ದಿನಗಳಲ್ಲೇ ವಾಜಪೇಯಿ ಆಸ್ಪತ್ರೆಯಿಂದ ಬಿಡುಗಡೆ: ಏಮ್ಸ್
ಮಾಜಿ ಪ್ರಧಾನಿ ಆಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯದಲ್ಲಿ ಗಣನೀಯ ಚೇತರಿಕೆ ಕಂಡುಬಂದಿದ್ದು, ಕೆಲ ದಿನಗಳಲ್ಲೇ ಆಸ್ಪತ್ರೆಯಿಂದ ಬಿಡುಗಡೆಗೊಳಿಸುವ ಭರವಸೆ ಇದೆ ಎಂದು ಏಮ್ಸ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

Published On :
ನವದೆಹಲಿ: ಮಾಜಿ ಪ್ರಧಾನಿ ಆಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯದಲ್ಲಿ ಗಣನೀಯ ಚೇತರಿಕೆ ಕಂಡುಬಂದಿದ್ದು, ಕೆಲ ದಿನಗಳಲ್ಲೇ ಆಸ್ಪತ್ರೆಯಿಂದ ಬಿಡುಗಡೆಗೊಳಿಸುವ ಭರವಸೆ ಇದೆ ಎಂದು ಏಮ್ಸ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಮುಂದಿನ ಕೆಲ ದಿನಗಳಲ್ಲಿ ಸಂಪೂರ್ಣವಾಗಿ ಗುಣಮುಖರಾಗಲಿದ್ದಾರೆ ಎಂಬ ವಿಶ್ವಾಸ ಇರುವುದಾಗಿ ಏಮ್ಸ್ ಆಸ್ಪತ್ರೆಯ ವೈದ್ಯ ರಣದೀಪ್ ಗುಲೆರಿಯಾ ಹೇಳಿದ್ದಾರೆ.ವಾಜಪೇಯಿ ಅವರ ಕಿಡ್ನಿ ಕಾರ್ಯನಿರ್ವಹಣೆ ಸಹಜ ಸ್ಥಿತಿಯತ್ತ ಮರಳಿದೆ. ಹೃದಯದ ಬಡಿತ, ನಾಡಿಮಿಡಿತ ಹಾಗೂ ರಕ್ತದೊತ್ತಡ ಸಾಮಾನ್ಯ ಸ್ಥಿತಿಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.
93 ವಯಸ್ಸಿನ ವಾಜಪೇಯಿ ಮೂತ್ರಕೋಶ ಮತ್ತಿತರ ತೊಂದರೆಯಿಂದಾಗಿ ಸೋಮವಾರ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ನಿನ್ನೆಯಿಂದ ಅವರ ಆರೋಗ್ಯದಲ್ಲಿ ಸ್ಥಿರತೆ ಕಂಡುಬಂದಿತ್ತು.ಡಾ. ರಣದೀಪ್ ಗುಲೆರಿಯಾ ನೇತೃತ್ವದ ತಂಡ ವಾಜಪೇಯಿ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸುತ್ತಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.
ಸೋಮವಾರ ಡಯಾಲಿಸಿಸ್ ಚಿಕಿತ್ಸೆಗೆ ಒಳಗಾಗಿದ್ದ ವಾಜಪೇಯಿ ಅವರನ್ನು ತುರ್ತು ನಿಗಾ ಘಟಕದಲ್ಲಿ ಇರಿಸಲಾಗಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ. ಅವರು ಸಕ್ಕರೆ ರೋಗ ಬಾಧಿತರಾಗಿದ್ದು, ಒಂದು ಕಿಡ್ನಿ ಕಾರ್ಯನಿರ್ವಹಿಸುತ್ತಿರಲಿಲ್ಲ. 2009ರಲ್ಲಿ ಮೂರ್ಛೆ ರೋಗಕ್ಕೆ ತುತ್ತಾಗಿ ನೆನಪಿನ ಶಕ್ತಿ ಕಳೆದುಕೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


