ದೇಶ

ಯುಪಿಪಿಎಸ್'ಸಿ ಮುಖ್ಯ ಪರೀಕ್ಷೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ

ಉತ್ತರಪ್ರದೇಶ ಲೋಕಸೇವಾ ಆಯೋಗ (ಯುಪಿಪಿಎಸ್'ಸಿ) ಮುಖ್ಯ ಪರೀಕ್ಷೆಗೆ ತಡೆ ನೀಡಲು ಸುಪ್ರೀಂಕೋರ್ಟ್ ಗುರುವಾರ ನಿರಾಕರಿಸಿದೆ...

ಯುಪಿಪಿಎಸ್'ಸಿ ಮುಖ್ಯ ಪರೀಕ್ಷೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ
ಸಂಗ್ರಹ ಚಿತ್ರ
Published On :
ನವದೆಹಲಿ; ಉತ್ತರಪ್ರದೇಶ ಲೋಕಸೇವಾ ಆಯೋಗ (ಯುಪಿಪಿಎಸ್'ಸಿ) ಮುಖ್ಯ ಪರೀಕ್ಷೆಗೆ ತಡೆ ನೀಡಲು ಸುಪ್ರೀಂಕೋರ್ಟ್ ಗುರುವಾರ ನಿರಾಕರಿಸಿದೆ. 
ಜೂನ್ 18 ರಂದು ನಡೆಯಲಿರುವ ಉತ್ತರಪ್ರದೇಶ ಲೋಕಸೇವಾ ಆಯೋಗ ಪರೀಕ್ಷೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಅಲ್ಲದೆ, ಪ್ರಿಲಿಮಿನರಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮರು ಮೌಲ್ಯಮಾಪನಕ್ಕೆ ಅಲಹಾಬಾದ್ ಹೈ ಕೋರ್ಟ್ ನೀಡಿದ್ದ ಆದೇಶವನ್ನೂ ರದ್ದುಗೊಳಿಸಿದೆ. 
ಯುಪಿಪಿಎಸ್'ಸಿ ವಿಷಯಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಅರ್ಜಿಯೊಂದು ದಾಖಲಾಗಿತ್ತು. 
ಈ ಅರ್ಜಿಯನ್ನು ರಜಕಾಲದ ಪೀಠದ ನ್ಯಾಮೂರ್ತಿಗಳಾದ ಯುಯು ಲಲಿತ್ ಹಾಗೂ ದೀಪಕ್ ಗುಪ್ತಾ ಅವರು ವಿಚಾರಣೆ ನಡೆಸಿದ್ದಾರೆ. 
ಯುಪಿಪಿಎಸ್'ಸಿ, ಹೈಕೋರ್ಟ್ ಆದೇಶವನ್ನು ಪರಿಪಾಲಿಸಿಲ್ಲವಾದ್ದರಿಂದ ಜೂ.18ರಂದು ನಡೆಯಲಿರುವ ಮುಖ್ಯ ಪರೀಕ್ಷೆಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಕೆಲ ವಿದ್ಯಾರ್ಥಿಗಳು ನ್ಯಾಯಾಲಯದಲ್ಲಿ ಮನವಿ ಮಾಡಿಕೊಂಡಿದ್ದರು. ಈ ಅರ್ಜಿಯನ್ನು ನ್ಯಾಯಪೀಠ ವಜಾಗೊಳಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.