ದೇಶ

ಕಾಶ್ಮೀರ: ಕಿಡ್ನಾಪ್ ಆಗಿದ್ದ ಭಾರತೀಯ ಯೋಧ ಔರಂಗಜೇಬ್ ಶವವಾಗಿ ಪತ್ತೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಕಿಡ್ನಾಪ್ ಆಗಿದ್ದ ಭಾರತೀಯ ಯೋಧ ಔರಂಗಜೇಬ್ ಅವರು ಗುರುವಾರ ಶವವಾಗಿ...

ಕಾಶ್ಮೀರ: ಕಿಡ್ನಾಪ್ ಆಗಿದ್ದ ಭಾರತೀಯ ಯೋಧ ಔರಂಗಜೇಬ್ ಶವವಾಗಿ ಪತ್ತೆ
ಸಾಂದರ್ಭಿಕ ಚಿತ್ರ
Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಕಿಡ್ನಾಪ್ ಆಗಿದ್ದ ಭಾರತೀಯ ಯೋಧ ಔರಂಗಜೇಬ್ ಅವರು ಗುರುವಾರ ಶವವಾಗಿ ಪತ್ತೆಯಾಗಿದ್ದಾರೆ.
ರಜೆ ಮೇಲೆ ತೆರಳಿದ್ದ 23 ರಾಷ್ಟ್ರೀಯ ರೈಫಲ್ಸ್ ನ ರೈಫಲ್ ಮನ್‌ ಆಗಿದ್ದ ಯೋಧ ಔರಂಗಜೇಬ್ ಅವರನ್ನು ಇಂದು ಬೆಳಗ್ಗೆ ಖಾಸಗಿ ವಾಹನದಲ್ಲಿ ತೆರಳುತ್ತಿದ್ದಾಗ ಪುಲ್ವಾಮಾದ ಕಲಾಂಪೊರಾ ಬಳಿ ಶಸ್ತ್ರ ಸಜ್ಜಿತ ಉಗ್ರರ ತಂಡ ಯೋಧನನ್ನು ಅಪಹರಿಸಿತ್ತು.
ಶೋಧ ನಡೆಸುತ್ತಿದ್ದ ಪೊಲೀಸರು ಮತ್ತು ಸೇನಾ ಅಧಿಕಾರಿಗಳ ತಂಡ ಇಂದು ಸಂಜೆ ಕಲಾಂಪೊರಾದಿಂದ 10 ಕಿ.ಮೀ ದೂರದಲ್ಲಿರುವ ಗುಸ್ಸು ಗ್ರಾಮದಲ್ಲಿ ಔರಂಗಜೇಬ್ ಅವರ ಶವ ಪತ್ತೆಹಚ್ಚಿದ್ದು, ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಕಳೆದ ಮೇ ತಿಂಗಳಲ್ಲಿ ಮೋಸ್ಟ್ ವಾಂಟೆಡ್ ಉಗ್ರ ಸಮೀರ್ ಟೈಗರ್ ಹಾಗೂ ಮತ್ತೋರ್ವ ಉಗ್ರನನ್ನು ಎನ್ ಕೌಂಟರ್ ನಲ್ಲಿ ಹತ್ಯೆಗೈಯಲಾಗಿತ್ತು. ಈ ವೇಳೆ ಯೋಧ ಔರಂಗಜೇಬ್ ಸಮೀರ್ ನನ್ನು ಗುಂಡು ಹಾರಿಸಿ ಕೊಂದು ಹಾಕಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.