ಪತ್ರಕರ್ತ ಬುಖಾರಿ ಹತ್ಯೆ: 4ನೇ ಆರೋಪಿಯ ಫೋಟೋ ಬಿಡುಗಡೆ, ತನಿಖೆಗಾಗಿ ಎಸ್ಐಟಿ ರಚನೆ
'ರೈಸಿಂಗ್ ಕಾಶ್ಮೀರ್' ದಿನ ಪತ್ರಿಕೆಯ ಸಂಪಾದಕ, ಹಿರಿಯ ಪತ್ರಕರ್ತ ಶುಜಾತ್ ಬುಖಾರಿಯ ಹತ್ಯೆಯ 4 ನೇ ಆರೋಪಿಯ ಫೋಟೊವನ್ನು ಜಮ್ಮು-ಕಾಶ್ಮೀರ ಪೊಲೀಸರು ಬಹಿರಂಗಗೊಳಿಸಿದ್ದಾರೆ.

Published On :
ಶ್ರೀನಗರ: 'ರೈಸಿಂಗ್ ಕಾಶ್ಮೀರ್' ದಿನ ಪತ್ರಿಕೆಯ ಸಂಪಾದಕ, ಹಿರಿಯ ಪತ್ರಕರ್ತ ಶುಜಾತ್ ಬುಖಾರಿಯ ಹತ್ಯೆಯ 4 ನೇ ಆರೋಪಿಯ ಫೋಟೊವನ್ನು ಜಮ್ಮು-ಕಾಶ್ಮೀರ ಪೊಲೀಸರು ಬಹಿರಂಗಗೊಳಿಸಿದ್ದಾರೆ.
ಪೊಲೀಸರು ಬಹಿರಂಗಪಡಿಸಿರುವ ಫೋಟೊದಲ್ಲಿ ವ್ಯಕ್ತಿಯ ಫೋಟೋ ಸ್ಪಷ್ಟವಾಗಿ ಕಾಣುತ್ತಿದ್ದು, ಆತನನ್ನು ಗುರುತಿಸಿ ಬಂಧಿಸಲು ಸಾರ್ವಜನಿಕರಿಂದ ಪೊಲೀಸರು ನೆರವು ಕೋರಿದ್ದಾರೆ. ಬುಖಾರಿ ಮೇಲೆ ಗುಂಡಿನ ದಾಳಿ ನಡೆದಾಗ ಸ್ಥಳೀಯರು ಚಿತ್ರೀಕರಿಸಿದ ವಿಡಿಯೋದಲ್ಲಿ ಫೋಟೊ ಸಿಕ್ಕಿದ್ದು, ಗುಂಡಿನ ದಾಳಿ ನಡೆಸಿದ ಬಳಿಕ ಕಾರಿನಲ್ಲಿದ್ದ ಭದ್ರತಾ ಸಿಬ್ಬಂದಿಯ ಬಳಿ ತಡಕಾಡುತ್ತಿದ್ದದ್ದೂ ವಿಡಿಯೋದಲ್ಲಿ ಸೆರೆಯಾಗಿದೆ.
ವಿಡಿಯೋದಲ್ಲಿ ದಾಖಲಾಗಿರುವ ವ್ಯಕ್ತಿ ಬುಖಾರಿ ಕಾರಿನಲ್ಲಿ ಬಿದ್ದಿದ್ದ ಭದ್ರತಾ ಸಿಬ್ಬಂದಿಗಳ ಪಿಸ್ತೂಲ್ ನ್ನು ಪೊಲೀಸ್ ಸಿಬ್ಬಂದಿಗಳ ಎದುರೇ ಕೊಂಡೊಯ್ದ ಘಟನೆಯೂ ದೃಶ್ಯದಲ್ಲಿ ಸೆರೆಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ಪೊಲೀಸರು ಜೂ.14 ರಂದು ರಾತ್ರಿ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಶಂಕಿತರ ಎರಡು ಚಿತ್ರಗಳನ್ನು ಪ್ರಕಟಿಸಿದ್ದರು. ಆದರೆ ಅವರ ಮುಖ ಸ್ಪಷ್ಟವಾಗಿ ಗೋಚರಿಸುತ್ತಿರಲಿಲ್ಲ.
ಬೈಕ್ ಚಾಲನೆ ಮಾಡುತ್ತಿದ್ದ ಓರ್ವ ವ್ಯಕ್ತಿ ಹೆಲ್ಮೆಟ್ ಹಾಕಿದ್ದರೆ, ಹಿಂಬದಿ ಕುಳಿತಿದ್ದ ಮತ್ತೋರ್ವ ತನ್ನ ಮುಖವನ್ನು ಮುಚ್ಚಿಕೊಂಡಿದ್ದ. ಸಿಸಿಟಿವಿಯಲ್ಲಿ ಸೆರೆಯಾಗಿದ್ದ ಮಧ್ಯದಲ್ಲಿ ಕುಳಿತಿದ್ದ ವ್ಯಕ್ತಿಯ ಮುಖ ಸ್ಪಷ್ಟವಾಗಿ ಕಾಣಿಸುತ್ತಿರಲಿಲ್ಲ. ಫೋಟೋದಲ್ಲಿರುವ ವ್ಯಕ್ತಿಯ ಸುಳಿವು ಸಿಕ್ಕರೆ ಕೊಥಿಬಾಗ್ ಪೊಲೀಸ್ ಠಾಣೆಯ 9596770623 ಈ ಸಂಖ್ಯೆ ಅಥವಾ ಶ್ರೀನಗರದ ಪಿಸಿಆರ್ 9596222550, 9596222551, 01942477568 ನ್ನು ಸಂಪರ್ಕಿಸಿ ವಿವರ ನೀಡಬಹುದಾಗಿದೆ. ಒಂದು ದಶಕದಲ್ಲಿ ಉಗ್ರರ ಗುಂಡೇಟಿಕಿಗೆ ಬಲಿಯಾಗಿರುವ 3 ನೇ ಪತ್ರಕರ್ತ ಬುಖಾರಿ ಆಗಿದ್ದು, ಪ್ರಕರಣದ ತನಿಖೆಗಾಗಿ ಡಿಐಜಿ ಮಟ್ಟದ ಅಧಿಕಾರಿ ನೇತೃತ್ವದ ಎಸ್ ಐಟಿಯನ್ನು ರಚಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಪೊಲೀಸರುKashmirಜಮ್ಮು-ಕಾಶ್ಮೀರಎಸ್ಐಟಿJammu and Kashmir PoliceShujaat Bukhari killingಪತ್ರಕರ್ತ ಬುಖಾರಿ ಹತ್ಯೆ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


