ಪ್ರಮುಖ ಸಿಬ್ಬಂದಿಗಳಿಲ್ಲದೆ ಕೆಲಸ ಮಾಡಲು ನಿಮಗೆ ಸಾಧ್ಯವೇ?: ಪ್ರಧಾನಿಗೆ ಕೇಜ್ರಿವಾಲ್ ಪ್ರಶ್ನೆ
ದೆಹಲಿ ಐಎಎಸ್ ಅಧಿಕಾರಿಗಳು ನಡೆಸುತ್ತಿರುವ ಮುಷ್ಕರವನ್ನು ಅಂತ್ಯಗೊಳಿಸಲು ಆಗ್ರಹಿಸುತ್ತಿರುವ ದೆಹಲಿ ಸಿಎಂ ಕೇಜ್ರಿವಾಲ್, ಪ್ರಮುಖ ಸಿಬ್ಬಂದಿಗಳಿಲ್ಲದೇ ಕೆಲಸ ಮಾಡಲು ನಿಮಗೆ ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.

Published On :
ನವದೆಹಲಿ: ದೆಹಲಿ ಐಎಎಸ್ ಅಧಿಕಾರಿಗಳು ನಡೆಸುತ್ತಿರುವ ಮುಷ್ಕರವನ್ನು ಅಂತ್ಯಗೊಳಿಸಲು ಆಗ್ರಹಿಸುತ್ತಿರುವ ದೆಹಲಿ ಸಿಎಂ ಕೇಜ್ರಿವಾಲ್, ಪ್ರಮುಖ ಸಿಬ್ಬಂದಿಗಳಿಲ್ಲದೇ ಕೆಲಸ ಮಾಡಲು ನಿಮಗೆ ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.
ಲೆಫ್ಟಿನೆಂಟ್ ಗೌರ್ನರ್ ನಿವಾಸದಲ್ಲಿ ಕೇಜ್ರಿವಾಲ್ ನದೆಸುತ್ತಿರುವ ಪ್ರತಿಭಟನೆ 5 ನೇ ದಿನಕ್ಕೆ ಕಾಲಿಟ್ಟಿದ್ದು, ಪ್ರಮುಖ ಸಿಬ್ಬಂದಿಗಳು ಸಭೆಗೆ ಬಾರದೇ ಇದ್ದರೆ ನೀವು ಆಡಳಿತ ನಡೆಸುವುದಕ್ಕೆ ಸಾಧ್ಯವೇ ಎಂದು ಕೇಜ್ರಿವಾಲ್ ಪ್ರಧಾನಿಯನ್ನು ಪ್ರಶ್ನಿಸಿದ್ದಾರೆ. ಪ್ರಧಾನಿಗೆ ಟ್ವೀಟ್ ಮಾಡಿರುವ ಕೇಜ್ರಿವಾಲ್ ಪ್ರಧಾನಿಗಳೇ ಒಂದು ವೇಳೆ ನೀವು ಸಭೆ ನಿಗದಿಪಡಿಸಿ ಪ್ರಮುಖ ಅಧಿಕಾರಿಗಳಾದ ಹಸ್ಮುಖ್ ಅಧಿಯಾ, ನೃಪೇಂದ್ರ ಮಿಶ್ರ, ಪ್ರದೀಪ್ ಸಿನ್ಹಾ, ಆರ್ ಎನ್ ಚೌಬೇ ಅಂತಹ ಪ್ರಮುಖ ಅಧಿಕಾರಿಗಳು ನಾವು ಪ್ರತಿಭಟನೆಯಲ್ಲಿದ್ದೇವೆ ಸಭೆಗೆ ಬರಲು ಸಾಧ್ಯವಿಲ್ಲ ಎಂದು ಹೇಳಿದರೆ ನಿಮಗೆ ಕೆಲಸ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.
ಐಎಎಸ್ ಅಧಿಕಾರಿಗಳ ಪ್ರತಿಭಟನೆಯನ್ನು ನಿಲ್ಲಿಸಬೇಕೆಂದು ಆಗ್ರಹಿಸಿ ದೆಹಲಿ ಸಿಎಂ ಕೇಜ್ರಿವಾಲ್, ಮನೀಷ್ ಸಿಸೋಡಿಯಾ, ಗೋಪಾಲ್ ರೈ ಹಾಗೂ ಸತ್ಯೇಂದ್ರ ಜೈನ್ ಸೋಮವಾರದಿಂದ ಲೆಫ್ಟಿನೆಂಟ್ ಗೌರ್ನರ್ ಅನಿಲ್ ಬೈಜಾಲ್ ಅವರ ನಿವಾಸಲ್ಲೇ ಪ್ರತಿಭಟನೆ ನಡೆಸುತ್ತಿದ್ದಾರೆ. ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದ ಕೇಜ್ರಿವಾಲ್, ಐಎಎಸ್ ಅಧಿಕಾರಿಗಳು ಪ್ರತಿಭಟನೆ ನಡೆಸುತ್ತಿರುವ ವಿಷಯಕ್ಕೆ ಸಂಬಂಧಿಸಿದಂತೆ ತಾವು ಮಧ್ಯಪ್ರವೇಶಿಸಬೇಕೆಂದು ಕೋರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


