ಪತ್ರಕರ್ತ ಬುಖಾರಿ ಹತ್ಯೆ: ಕಾಶ್ಮೀರ ಪೊಲೀಸರಿಂದ ಶಂಕಿತ ಆರೋಪಿ ಬಂಧನ
'ರೈಸಿಂಗ್ ಕಾಶ್ಮೀರ್' ದಿನ ಪತ್ರಿಕೆಯ ಸಂಪಾದಕ, ಹಿರಿಯ ಪತ್ರಕರ್ತ ಶುಜಾತ್ ಬುಖಾರಿಯ ಹಾಗೂ ಅವರ ಇಬ್ಬರು...

Published On :
ಶ್ರೀನಗರ: 'ರೈಸಿಂಗ್ ಕಾಶ್ಮೀರ್' ದಿನ ಪತ್ರಿಕೆಯ ಸಂಪಾದಕ, ಹಿರಿಯ ಪತ್ರಕರ್ತ ಶುಜಾತ್ ಬುಖಾರಿಯ ಹಾಗೂ ಅವರ ಇಬ್ಬರು ಅಂಗರಕ್ಷಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶುಕ್ರವಾರ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ.
ಶಂಕಿತ ಆರೋಪಿ ಜುಬೈರ್ ಖದ್ರಿ ಎಂದು ಗುರುತಿಸಲಾಗಿದೆ ಎಂದು ಕಾಶ್ಮೀರ ಪೊಲೀಸ್ ಮಹಾ ನಿರ್ದೇಶಕ ಸ್ವಯಂ ಪ್ರಕಾಶ್ ಪಾನಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಖಾದ್ರಿ, ಬುಖಾರಿ ಕಾರಿನಲ್ಲಿ ಹತ್ಯೆಯಾಗಿ ಬಿದ್ದಿದ್ದ ಭದ್ರತಾ ಸಿಬ್ಬಂದಿಗಳ ಪಿಸ್ತೂಲ್ ಕೊಂಡೊಯ್ಯುತ್ತಿರುವ ದೃಶ್ಯ ಸಿಸಿಟಿವಿ ದಾಖಲಾಗಿದ್ದು, ಅದನ್ನು ಆಧರಿಸಿ ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅವರು ಪಾನಿ ಹೇಳಿದ್ದಾರೆ.
ಆರೋಪಿಯಿಂದ ಪಿಸ್ತೂಲ್ ಅನ್ನು ಜಪ್ತಿ ಮಾಡಲಾಗಿದ್ದು, ಘಟನೆ ನಡೆದ ಸ್ಥಳದಲ್ಲಿ ಆತ ಹೇಗೆ ಬಂದ ಎಂಬುದರ ಬಗ್ಗೆ ವಿಚಾರಣೆಗೊಳಪಡಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಹಿರಿಯ ಪತ್ರಕರ್ತನ ಹತ್ಯೆ ಪ್ರಕರಣದ ತನಿಖೆಗಾಗಿ ಕಾಶ್ಮೀರ ಉಪ ಪೊಲೀಸ್ ಮಹಾ ನಿರ್ದೇಶಕ ವಿಕೆ ವೃದ್ದಿ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ(ಎಸ್ ಐಟಿ) ರಚಿಸಲಾಗಿದೆ ಎಂದು ಪಾನಿ ತಿಳಿಸಿದ್ದಾರೆ.
ಶುಜಾತ್ ಬುಖಾರಿ ಹತ್ಯೆ ಒಂದು ಉಗ್ರರ ದಾಳಿ ಎಂದಿರುವ ಕಾಶ್ಮೀರ ಪೊಲೀಸ್ ಮಹಾ ನಿರ್ದೇಶಕ, ಶೀಘ್ರದಲ್ಲೇ ಇತರೆ ಮೂವರು ಆರೋಪಿಗಳ ಗುರುತು ಪತ್ತೆಹಚ್ಚುವುದಾಗಿ ಹೇಳಿದ್ದಾರೆ.
ಇದಕ್ಕು ಮುನ್ನ ಬುಖಾರಿಯ ಹತ್ಯೆಯ 4ನೇ ಆರೋಪಿಯ ಫೋಟೊವನ್ನು ಜಮ್ಮು-ಕಾಶ್ಮೀರ ಪೊಲೀಸರು ಬಹಿರಂಗಗೊಳಿಸಿದ್ದರು. ಅಲ್ಲದೆ ವ್ಯಕ್ತಿಯ ಫೋಟೋ ಸ್ಪಷ್ಟವಾಗಿ ಕಾಣುತ್ತಿದ್ದು, ಆತನನ್ನು ಗುರುತಿಸಿ ಬಂಧಿಸಲು ಸಾರ್ವಜನಿಕರಿಂದ ನೆರವು ನೀಡಬೇಕು ಎಂದು ಮನವಿ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Kashmir policeಕಾಶ್ಮೀರ ಪೊಲೀಸರುShujaat Bukhari killingarrests one suspectಶುಜಾತ್ ಬುಖಾರಿ ಹತ್ಯೆಶಂಕಿತ ಆರೋಪಿ ಬಂಧನ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


