ಮಗಳಿಂದ ಪೊಲೀಸ್ ಕಚೇರಿಯ ಚಾಲಕನ ಮೇಲೆ ಹಲ್ಲೆ, ಎಡಿಜಿಪಿ ಹುದ್ದೆಯಿಂದ ಸುದೇಶ್ ಕುಮಾರ್ ಅಮಾನತು
ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ಮಗಳು ಕಚೇರಿಯ ಚಾಲಕನ ಮೇಲೆ ಹಲ್ಲೆ ನಡೆಸಿ, ಗಾಯಗೊಳಿಸಿದ್ದ ಆರೋಪದ ಮೇರೆಗೆ ಎಡಿಜಿಪಿ ಸ್ಥಾನದಿಂದ ಸುದೇಶ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.

Published On :
ತಿರುವನಂತಪುರಂ: ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ಮಗಳು ಕಚೇರಿಯ ಚಾಲಕನ ಮೇಲೆ ಹಲ್ಲೆ ನಡೆಸಿ, ಗಾಯಗೊಳಿಸಿದ್ದ ಆರೋಪದ ಮೇರೆಗೆ ಎಡಿಜಿಪಿ ಸ್ಥಾನದಿಂದ ಸುದೇಶ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.
ಪೊಲೀಸ್ ಡ್ರೈವರ್ ಗಾವಸ್ಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತನ ಹೆಂಡತಿ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರನ್ನು ನೇರವಾಗಿ ಭೇಟಿ ಮಾಡಿ ಅಧಿಕಾರಿಯ ವಿರುದ್ಧ ದೂರು ದಾಖಲಿಸಿದ್ದರು.
ಈ ಸಂಬಂಧ ಮುಖ್ಯಮಂತ್ರಿಗಳು ದಕ್ಷಿಣ ವಲಯ ಎಡಿಜಿಪಿ ಅನಿಲ್ ಕುಮಾರ್ ಅವರಿಂದ ಮಾಹಿತಿ ಸಂಗ್ರಹಿಸಿದ್ದು, ಸೂಕ್ತ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.
ಸುದೇಶ್ ಕುಮಾರ್ ಆರ್ಡಲಿಯಲ್ಲಿ ಪೊಲೀಸರನ್ನು ತನ್ನ ಮನೆ ಕೆಲಸಕ್ಕೆ ಬಳಸಿಕೊಳ್ಳುತ್ತಿದ್ದ ದೂರು ಕೇಳಿಬಂದಿದೆ. ಇನ್ನಿತರ ಸರ್ಕಾರದ ಇಲಾಖೆಯಲ್ಲಿ ಅವರಿಗೆ ಹುದ್ದೆ ನೀಡುವ ಸಾಧ್ಯತೆ ಇದೆ ಎಂದು ಪೊಲೀಸರ ಹೊರಗಿನ ಮಾಹಿತಿಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


