ಸರ್ಕಾರಿ ಗೌರವಗಳೊಂದಿಗೆ ರಾಷ್ಟ್ರೀಯ ರೈಫಲ್ಸ್ ನ ಯೋಧ ಔರಂಗಜೇಬ್ ನ ಅಂತ್ಯಕ್ರಿಯೆ
ಭಯೋತ್ಪಾದಕರಿಂದ ಹತ್ಯೆಗೀಡಾಗಿದ್ದ ರಾಷ್ಟ್ರೀಯ ರೈಫಲ್ಸ್ ನ ಯೋಧ ಔರಂಗಜೇಬ್ ನ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ.

Published On :
ಶ್ರೀನಗರ: ಭಯೋತ್ಪಾದಕರಿಂದ ಹತ್ಯೆಗೀಡಾಗಿದ್ದ ರಾಷ್ಟ್ರೀಯ ರೈಫಲ್ಸ್ ನ ಯೋಧ ಔರಂಗಜೇಬ್ ನ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದೆ.
ಪೂಂಛ್ ನಲ್ಲಿ ಔರಂಗಜೇಬ್ ನ ಅಂತ್ಯಕ್ರಿಯೆ ನಡೆದಿದ್ದು ಯೋಧನಿಗೆ ನೂರಾರು ಜನರು ಅಂತಿಮ ನಮನ ಸಲ್ಲಿಸಿದರು. ನನ್ನ ಪುತ್ರ ಆತನ ಪ್ರತಿಜ್ಞೆಯನ್ನು ಉಳಿಸಿಕೊಂಡಿದ್ದಾನೆ, ದೇಶಕ್ಕಾಗಿ ತನ್ನನ್ನು ತಾನು ಅರ್ಪಿಸಿಕೊಂಡಿದ್ದಾನೆ, ಭಯೋತ್ಪಾದನೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಮನವಿ ಮಾಡುತ್ತೇನೆ ಎಂದು ಔರಂಗಜೇಬ್ ನ ತಂದೆ ಹೇಳಿದ್ದಾರೆ.
ಈದ್ ಆಚರಣೆಗಾಗಿ ಮನೆಗೆ ತೆರಳುತ್ತಿದ್ದಾಗ ಭಯೋತ್ಪಾದಕರು ಔರಂಗಜೇಬ್ ನ್ನು ಹತ್ಯೆ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


