ಯೋಧರ ಸಾವು ಹಿನ್ನಲೆ, ರಂಜಾನ್ ಕದನ ವಿರಾಮ ವಿಸ್ತರಣೆ ಇಲ್ಲ ಎಂದ ಕೇಂದ್ರ ಸರ್ಕಾರ
ಉಗ್ರರ ಸರಣಿ ದಾಳಿ ಮತ್ತು ಪಾಕಿಸ್ತಾನ ಸೇನೆಯ ಅಪ್ರಚೋದಿತ ದಾಳಿಯಿಂದಾಗಿ ಕೇಂದ್ರ ಸರ್ಕಾರ ರಂಜಾನ್ ಕದನವಿರಾಮ ವಿಸ್ತರಣೆ ನಿರ್ಧಾರದಿಂದ ಹಿಂದಕ್ಕೆ ಸರಿದಿದೆ.

Published On :
ನವದೆಹಲಿ: ಉಗ್ರರ ಸರಣಿ ದಾಳಿ ಮತ್ತು ಪಾಕಿಸ್ತಾನ ಸೇನೆಯ ಅಪ್ರಚೋದಿತ ದಾಳಿಯಿಂದಾಗಿ ಕೇಂದ್ರ ಸರ್ಕಾರ ರಂಜಾನ್ ಕದನವಿರಾಮ ವಿಸ್ತರಣೆ ನಿರ್ಧಾರದಿಂದ ಹಿಂದಕ್ಕೆ ಸರಿದಿದೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು, ರಂಜಾನ್ ಕದನ ವಿರಾಮ ವಿಸ್ತರಣೆ ಮಾಡುವುದಿಲ್ಲ ಎಂದು ಘೋಷಿಸಿದ್ದಾರೆ. ಕಳೆದ ಮೇ 17ರಂದು ಪವಿತ್ರ ರಂಜಾನ್ ಮಾಸದ ನಿಮಿತ್ತ ಗಡಿಯಲ್ಲಿ ಕದನ ವಿರಾಮ ಘೋಷಣೆ ಮಾಡಲಾಗಿತ್ತು. ರಂಜಾನ್ ಮಾಸದಲ್ಲಿ ಭಾರತೀಯ ಸೇನೆ ಯಾವುದೇ ರೀತಿಯ ಸೈನಿಕ ಕಾರ್ಯಾಚರಣೆ ಮಾಡದಂತೆ, ಕಣಿವೆಯಲ್ಲಿ ಶಾಂತಿ ಸ್ಥಾಪನೆಗೆ ಅನುವು ಮಾಡಿಕೊಡಲು ರಂಜಾನ್ ಕದನ ವಿರಾಮವನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿತ್ತು.
ಆದರೆ ಇತ್ತೀಚಿನ ದಿನಗಳಲ್ಲಿ ನಿರಂತರ ಉಗ್ರ ದಾಳಿ, ಪಾಕಿಸ್ತಾನ ಸೇನೆಯ ಅಪ್ರಚೋದಿತ ದಾಳಿ ಪ್ರಕರಣಗಳು ಪುನರಾವರ್ತನೆಯಾಗುತ್ತಿರುವುದರಿಂದ ಕದನ ವಿರಾಮ ವಿಸ್ತರಣೆ ಸಾಧ್ಯವಿಲ್ಲ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
ಸೇನೆ ಶಾಂತಿಯುತವಾಗಿದ್ದರೂ ಅವರನ್ನು ಕೆಣಕುವ ಕೆಲಸವನ್ನು ಉಗ್ರರು ಮಾಡುತ್ತಿದ್ದಾರೆ. ಸರಣಿ ದಾಳಿಗಳಿಂದಾಗಿ ಸೇನೆಯ ಸೈನಿಕರು ಹುತಾತ್ಮರಾಗಿದ್ದಾರೆ. ಉಗ್ರರು ಮತ್ತು ಪಾಕಿಸ್ತಾನ ಸೇನೆಯ ದಾಳಿಯಿಂದಾಗಿ ಕಣಿವೆ ರಾಜ್ಯದ ಜನರಿಗೆ ಅನಾನೂಕೂಲವಾಗುತ್ತಿದೆ. ಹೀಗಾಗಿ ರಂಜಾನ್ ಕದನ ವಿರಾಮ ವಿಸ್ತರಣೆ ಮಾಡದೆ ಶಾಂತಿ ಸ್ಥಾಪನೆಗಾಗಿ ಬೇಕಾದ ಎಲ್ಲ ಕಾರ್ಯಗಳನ್ನು ಕೈಗೊಳ್ಳುವಂತೆ ಸೈನಿಕರಿಗೆ ಆದೇಶಿಸಲಾಗಿದೆ ಎಂದು ರಾಜನಾಥ್ ಸಿಂಗ್ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿರಾಜನಾಥ್ ಸಿಂಗ್New DelhiindiaಭಾರತPakistanಪಾಕಿಸ್ತಾನಜಮ್ಮು ಮತ್ತು ಕಾಶ್ಮೀರJammu and KashmirRajnath Singhರಂಜಾನ್Ramzan
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


