ತೆಲಂಗಾಣ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆ
26 ವರ್ಷದ ಕಾಮುಕ ಕಾರ್ಮಿಕನೊಬ್ಬ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಘಟನೆ...

Published On :
ಹೈದರಾಬಾದ್: 26 ವರ್ಷದ ಕಾಮುಕ ಕಾರ್ಮಿಕನೊಬ್ಬ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ನಿರ್ಮಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ.
ನಿನ್ನೆ ಸೋನ್ ಮಂಡಲ್ ದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಪ್ರವೀಣ್ ಕುಮಾರ್, ಮನೆಯ ಬಳಿ ಆಟವಾಡುತ್ತಿದ್ದ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಬಳಿಕ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಪೋಷಕರು ಬಾಲಕಿಗಾಗಿ ಹುಡುಕಾಟ ನಡೆಸಿದ ಬಳಿಕ ಪೊಲೀಸರಿಗೆ ದೂರು ನೀಡಿದ್ದರು. ಇಂದು ಮಧ್ಯಾಹ್ನ ಸ್ಥಳೀಯರು ಬಾಲಕಿಯ ಮೃತದೇಹ ಪತ್ತೆ ಹಚ್ಚಿದ್ದು, ಕೂಡಲೇ ಪೋಷಕರಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ ಪೊಲೀಸರು ಆರೋಪಿ ಪ್ರವೀಣ್ ಕುಮಾರ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ವಿಚಾರಣೆ ವೇಳೆ ಆರೋಪಿ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಆರೋಪಿ ಪ್ರವೀಣ್ ಕುಮಾರ್ ವಿರುದ್ಧ ಪೋಸ್ಕೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


