ಯೋಧ ಔರಂಗಜೇಬ್ ನ ಹತ್ಯೆ ಹಿಂದೆ ಪಾಕ್ ನ ಐಎಸ್ಐ ಕೈವಾಡ?
ಯೋಧ ಔರಂಗಜೇಬ್ ನ ಹತ್ಯೆ ಹಿಂದೆ ಪಾಕಿಸ್ತಾನದ ಐಎಸ್ಐ ಕೈವಾಡವಿದೆ ಎಂದು ಗುಪ್ತಚರ ಇಲಾಖೆ ಅನುಮಾನ ವ್ಯಕ್ತಪಡಿಸಿದೆ.

Published On :
ನವದೆಹಲಿ: ಯೋಧ ಔರಂಗಜೇಬ್ ನ ಹತ್ಯೆ ಹಿಂದೆ ಪಾಕಿಸ್ತಾನದ ಐಎಸ್ಐ ಕೈವಾಡವಿದೆ ಎಂದು ಗುಪ್ತಚರ ಇಲಾಖೆ ಅನುಮಾನ ವ್ಯಕ್ತಪಡಿಸಿದೆ.
ಭಯೋತ್ಪಾದಕರಿಂದ ಅಪಹರಣಕ್ಕೊಳಗಾಗಿದ್ದ ಯೋಧ ಔರಂಗಜೇಬ್ ನ್ನು ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಹತ್ಯೆ ಮಾಡಲಾಗಿತ್ತು. ಔರಂಗಜೇಬ್ ಹತ್ಯೆಯಲ್ಲಿ ಪಾಕಿಸ್ತಾನದ ಐಎಸ್ಐ, ಪಾಕ್ ನ ಉಗ್ರ ಸಂಘಟನೆಗಳಾದ ಲಷ್ಕರ್-ಎ-ತಯ್ಬಾ(ಎಲ್ ಇಟಿ) ಜೈಶ್-ಎ-ಮೊಹಮ್ಮದ್ ಹಾಗೂ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕೈವಾಡವಿರುವ ಸಾಧ್ಯತೆ ಇದ್ದು, ಘಟನೆಗೆ ಹೊಣೆ ಹೊರದಂತೆ ಐಎಸ್ಐ ಉಗ್ರ ಸಂಘಟನೆಗಳಿಗೆ ಸೂಚಿಸಿದೆ ಎಂದು ಗುಪ್ತಚರ ಇಲಾಖೆ ಹೇಳಿದೆ.
ಔರಂಗಜೇಬ್ ನ ಹತ್ಯೆಯ ನಂತರ ಐಎಸ್ಎಸ್ ಕಾಶ್ಮೀರ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಔರಂಗಜೇಬ್ ಹತ್ಯೆಗೆ ಕಣಿವೆ ರಾಜ್ಯದಲ್ಲಿ ವ್ಯಕ್ತವಾಗುತ್ತಿರುವ ಆಕ್ರೋಶ ಹಾಗೂ ಭಾರತೀಯ ಸೇನೆಗೆ ವ್ಯಕ್ತವಾಗುತ್ತಿರುವ ಬೆಂಬಲ ಎರಡೂ ಪಾಕಿಸ್ತಾನದ ಐಎಸ್ಐ ಗೆ ತಲೆನೋವಾಗಿ ಪರಿಣಮಿಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


