ದೆಹಲಿ ಬಿಕ್ಕಟ್ಟಿನ ಬಗ್ಗೆ ಪ್ರಧಾನಿ ಏನನ್ನೂ ಹೇಳಲಿಲ್ಲ- ಮಮತಾ
ದೆಹಲಿಯಲ್ಲಿನ ರಾಜಕೀಯ ಬೆಳವಣಿಗೆ ಕುರಿತು ಪ್ರಧಾನಮಂತ್ರಿ ಏನನ್ನೂ ಹೇಳಲಿಲ್ಲ. ಯಾವುದೇ ರೀತಿಯ ಭರವಸೆ ನೀಡಲಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

Published On :
ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ರಾಜಕೀಯ ಬೆಳವಣಿಗೆ ಕುರಿತು ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಬಳಿ ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳು ಪ್ರಸ್ತಾಪಿಸಿದಾಗ ಮೋದಿ ಅವರು ಏನನ್ನೂ ಹೇಳಲಿಲ್ಲ. ಯಾವುದೇ ರೀತಿಯ ಭರವಸೆ ನೀಡಲಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ನೀತಿ ಆಯೋಗದ ಆಡಳಿತ ಮಂಡಳಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, ತಮ್ಮನ್ನು ಸೇರಿದಂತೆ ನಾಲ್ವರು ರಾಜ್ಯಗಳ ಮುಖ್ಯಮಂತ್ರಿಗಳು ಪ್ರಧಾನಿ ನರೇಂದ್ರಮೋದಿ ಹಾಗೂ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ, ದೆಹಲಿ ಬಿಕ್ಕಟ್ಟು ಬಗೆಹರಿಸುವಂತೆ ಮನವಿ ಮಾಡಿಕೊಂಡೆವು ಎಂದು ತಿಳಿಸಿದರು.
ಕಾಲಮಿತಿಯಲ್ಲಿ ಸಮಸ್ಯೆ ಪರಿಹಾರದ ಬಗ್ಗೆ ಜನತೆಗೆ ಭರವಸೆ ನೀಡಿ ಎಂದು ಕೇಳಿಕೊಂಡೆವು. ಆದರೆ, ಪ್ರಧಾನಿ ಏನನ್ನೂ ಹೇಳಲಿಲ್ಲ. ಗೃಹ ಸಚಿವರು ಮಾತ್ರ ಈ ವಿಚಾರದ ಬಗ್ಗೆ ಗಮನ ಹರಿಸುವುದಾಗಿ ಹೇಳಿದರು ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


