ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಯಿಂದ ವಿಜಯ್ ಮಲ್ಯ ವಿರುದ್ಧ ಹೊಸ ಚಾರ್ಜ್ ಶೀಟ್
ರಾಷ್ಟ್ರೀಕೃತ ಬ್ಯಾಂಕುಗಳಿಗೆ 6,000 ಕೋಟಿ ರು. ವಂಚನೆ ಪ್ರಕರಣ, ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಮದ್ಯದ ದೊರೆ ವಿಜಯ್ ಮಲ್ಯ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ)....

Published On :
ಮುಂಬೈ: ರಾಷ್ಟ್ರೀಕೃತ ಬ್ಯಾಂಕುಗಳಿಗೆ 6,000 ಕೋಟಿ ರು. ವಂಚನೆ ಪ್ರಕರಣ, ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಮದ್ಯದ ದೊರೆ ವಿಜಯ್ ಮಲ್ಯ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಹೊಸತಾಗಿ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಜಾರಿ ನಿರ್ದೇಶನಾಲಯದಿಂದ ಮುಂಬೈನ ವಿಶೇಷ ನ್ಯಾಯಾಲಯಕ್ಕೆ ಇದಕ್ಕೂ ಮುನ್ನವೇ ಒಂದು ಚಾರ್ಜ್ ಶೀಟ್ ಸಲ್ಲಿಕೆಯಾಗಿತ್ತು.
ಪ್ರಸಕ್ತ ಚಾರ್ಜ್ ಶೀಟ್ ನಲ್ಲಿ ಮಲ್ಯ, ಕಿಂಗ್ ಫಿಶರ್ ಏರ್ ಲೈನ್ಸ್, ಯುನೈಟೆಡ್ ಬ್ರೇವರೀಸ್ ಹೋಲ್ಡಿಂಗ್ಸ್ ಲಿಮಿಟೆಡ್ ಮತ್ತು ಇತ್ರೆ ಸಂಸ್ಥೆಗಳನ್ನು ಹೆಸರಿಸಲಾಗಿದೆ.
ಈ ಚಾರ್ಜ್ ಶೀಟ್ ಸಲ್ಲಿಕೆ ಬಳಿಕ ಕೇಂದ್ರೀಯ ತನಿಖಾ ಸಂಸ್ಥೆ ಉದ್ಯಮಿ ಮಲ್ಯಗೆ ಸೇರಿದ 9 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಲು ಅನುಮತಿ ನೀಡುವಂತೆ ಕೋರಿದೆ ಎಂದು ಪಿಟಿಐ ವರದಿ ಮಾಡಿತ್ತು.
ಮಲ್ಯ ಒಡೆತನದ ಕಿಂಗ್ ಫಿಶರ್ ಏರ್ ಲೈನ್ಸ್ ಐಡಿಬಿಐ ಬ್ಯಾಂಕ್ ಗೆ 900 ಕೋಟಿ ರೂ. ವಂಚಿಸಿದೆ ಎಂದು ಕಳೆದ ವರ್ಷ ಇಡಿ ಮಲ್ಯ ವಿರುದ್ಧ ಮೊದಲ ಚಾರ್ಜ್ ಶೀಟ್ ಸಲ್ಲಿಸಿತ್ತು. ಪ್ರಸ್ತುತ ಲಂಡನ್ ನಲ್ಲಿರುವ ಮಲ್ಯ ವಿರುದ್ಧದ ಪ್ರಕರಣದಲ್ಲಿ ಇಡಿ ಇದುವರೆವಿಗೆ 9,890 ಕೋಟಿ ರೂ. ಆಸ್ತಿಗಳ ಪಟ್ಟಿ ಮಾಡಿದೆ.
2005-10ನೇ ಸಾಲಿನಲ್ಲಿ ತೆಗೆದುಕೊಂಡ ಸಾಲಗಳ ಮರುಪಾವತಿ ಮಾಡದೆ 6,027 ಕೋಟಿ ರೂ.ಗಳ ನಷ್ಟಕ್ಕೆ ಕಾರಣವಾಗಿರುವ ವಿಜಯ್ ಮಲ್ಯ ವಿರುದ್ಧ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಪ್ರಕರಣ ಸಹ ಚಾರ್ಜ್ ಶೀಟ್ ನಲ್ಲಿ ದಾಖಲಾಗಿದೆ. ಸಿಬಿಐ ದಾಖಲಿಸಿದ್ದ ಎಫ್ ಐಆರ್ ಆಧಾರದಲ್ಲಿ ಇಡಿ ತನ್ನ ತನಿಖೆ ನಡೆಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Enforcement Directorateಜಾರಿ ನಿರ್ದೇಶನಾಲಯಚಾರ್ಜ್ ಶೀಟ್ChargesheetVijay Mallyaವಿಜಯ್ ಮಲ್ಯMallya bank loanಮಲ್ಯ ಬ್ಯಾಂಕ್ ಸಾಲ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


