ದೇಶ

ಲೆಫ್ಟಿನೆಂಟ್ ಗವರ್ನರ್ ಕಚೇರಿಯಲ್ಲಿ ಕೇಜ್ರಿವಾಲ್ ಧರಣಿ ವಿರೋಧಿಸಿ ಅರ್ಜಿ: ತುರ್ತು ಪರಿಶೀಲನೆಗೆ 'ಸುಪ್ರೀಂ' ನಕಾರ

ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾರ್ ಅವರ ಕಚೇರಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಅವರ ಸಂಪುಟ...

ಲೆಫ್ಟಿನೆಂಟ್ ಗವರ್ನರ್ ಕಚೇರಿಯಲ್ಲಿ ಕೇಜ್ರಿವಾಲ್ ಧರಣಿ ವಿರೋಧಿಸಿ ಅರ್ಜಿ: ತುರ್ತು ಪರಿಶೀಲನೆಗೆ 'ಸುಪ್ರೀಂ' ನಕಾರ
ಸುಪ್ರೀಂಕೋರ್ಟ್
Published On :
ನವದೆಹಲಿ: ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾರ್ ಅವರ ಕಚೇರಿಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಅವರ ಸಂಪುಟ ಸಹೋದ್ಯೋಗಿಗಳು ನಡೆಸುತ್ತಿದ್ದ ಧರಣಿ ವಿರುದ್ಧ ದಾಖಲಾಗಿದ್ದ ಅರ್ಜಿಯನ್ನು ತುರ್ತು ಪರಿಶೀಲನೆ ನಡೆಸಲು ಸುಪ್ರೀಂಕೋರ್ಟ್ ಮಂಗಳವಾರ ನಿರಾಕರಿಸಿದೆ. 
ಕೇಜ್ರಿವಾಲ್ ಧರಣಿ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಯನ್ನು ತುರ್ತು ಪರಿಶೀಲನೆ ನಡೆಸಲು ನಿರಾಕರಿಸಿರುವ ಸುಪ್ರೀಂಕೋರ್ಟ್, ಕೇಜ್ರಿವಾಲ್ ಹಾಗೂ ಅವರ ಸಂಪುಟದ ಮುಖಂಡರು ನಡೆಸುತ್ತಿರುವ ಧರಣಿ ಅಸಾಂವಿಧಾನಿಕವಾದದ್ದು ಎಂದು ಹೇಳಿದೆ. ಅಲ್ಲದೆ, ಈ ಕುರಿತ ಅರ್ಜಿಯನ್ನು ಬೇಸಿಗೆ ರಜೆ ಬಳಿಕ ಪರಿಶೀಲನೆ ನಡೆಸುವುದಾಗಿ ತಿಳಿಸಿದೆ. 
ಐಎಎಸ್ ಅಧಿಕಾರಿಗಳು ಕರ್ತವ್ಯಕ್ಕೆ ಮರಳಬೇಕು ಎಂದು ಆಗ್ರಹಿಸಿ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಹಾಗೂ ಅವರ ಮಂತ್ರಿಮಂಡಲದ ಸದ್ಯರು ನಡೆಸುತ್ತಿರುವ ಮುಷ್ಕರ 9ನೇ ದಿನಕ್ಕೆ ಕಾಲಿಟ್ಟಿದೆ. 
3 ತಿಂಗಳಿನಿಂದ ಪರೋಕ್ಷ ಮುಷ್ಕರ ನಡೆಸುತ್ತಿರುವ ಐಎಎಸ್ ಅಧಿಕಾರಿಗಳು ಕರ್ತವ್ಯಕ್ಕೆ ಹಾಜರಾಗಬೇಕು ಹಾಗೂ ನಾಗರೀಕರ ಮನೆ ಬಾಗಿಲಿಗೇ ಪಡಿತರ ವಿತರಿಸುವ ಕಾರ್ಯ ಆರಂಭಿಸಬೇಕು ಎಂದು ಕೇಜ್ರಿವಾಲ್ ಹಾಗೂ ಅವರ ಸಂಪುಟದ ಸದಸ್ಯರು ಜೂ.13 ರಂದು ಉಪ ರಾಜ್ಯಪಾಲರ ಕಚೇರಿಯ ಸೋಫಾದಲ್ಲಿ ಕುಳಿತು ಧರಣಿ ಆರಂಭಿಸಿದ್ದರು. ಆಂದಿನಿಂದಲೂ ಅವರು ಕದಲಿಲ್ಲ. ಈ ನಡುವೆ ಭಾನುವಾರಷ್ಟೇ ಐಎಎಸ್ ಅಧಿಕಾರಿಗಳಿಗೆ ಟ್ವಿಟರ್ ಮೂಲಕ ಮನವಿ ಮಾಡಿಕೊಂಡಿದ್ದ ಕೇಜ್ರಿವಾಲ್ ಅವರು, ಅಧಿಕಾರಿಗಳು ನನ್ನ ಕುಟುಂಬವಿದ್ದಂತೆ. ಸಚಿವರ ಜೊತೆಗಿನ ಸಭೆಗಳಲ್ಲಿ ಅವರ ಸುರಕ್ಷತೆ ಹಾಗೂ ಭದ್ರತೆ ಕುರಿತು ಬಹಿರಂಗ ಆಶ್ವಾಸನೆ ನೀಡುತ್ತೇನೆ. ಅಧಿಕಾರಿಗಳು ಕರ್ತವ್ಯಕ್ಕೆ ಬಹಿಷ್ಕಾರ ಸ್ಥಗಿತಗೊಳಿಸಿ ಸೇವೆಗೆ ಮರಳಬೇಕು ಎಂದು ಹೇಳಿದ್ದರು. 
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಐಎಎಸ್ ಅಧಿಕಾರಿಗಳ ಸಂಘ, ಮುಖ್ಯಮಂತ್ರಿಗಳ ಮನವಿಯನ್ನು ಸ್ವಾಗತಿಸುತ್ತೇವೆ. ನಮ್ಮ ಭದ್ರತೆ ಹಾಗೂ ಗೌರವದ ಕುರಿತು ಸೂಕ್ತ ಭರವಸೆಗಳನ್ನು ನಿರೀಕ್ಷಿಸುತ್ತಿದ್ದೇವೆ. ಈ ಸಂಬಂಧ ಮುಖ್ಯಮಂತ್ರಿಗಳ ಜೊತೆಗೆ ಮಾತುಕತೆಗೆ ಸಿದ್ಧ ಎಂದು ಹೇಳಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.