ದೇಶ

ಲೋಕಸಭಾ ಚುನಾವಣೆ ಹಿನ್ನೆಲೆ ಏರ್ ಇಂಡಿಯಾ ಖಾಸಗೀಕರಣದಿಂದ ಹಿಂದೆ ಸರಿದ ಕೇಂದ್ರ!

ಕೇಂದ್ರ ಸರ್ಕಾರಿ ಸಾಮ್ಯದ ಏರ್ ಇಂಡಿಯಾ ಖಾಸಗೀಕರಣಕ್ಕೆ ಮುಂದಾಗಿದ್ದ ಕೇಂದ್ರ ಸರ್ಕಾರ ಇದೀಗ ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಿಂದಾಗಿ ಹಿಂದೆ ಸರಿದಿದೆ...

ಲೋಕಸಭಾ ಚುನಾವಣೆ ಹಿನ್ನೆಲೆ ಏರ್ ಇಂಡಿಯಾ ಖಾಸಗೀಕರಣದಿಂದ ಹಿಂದೆ ಸರಿದ ಕೇಂದ್ರ!
ಏರ್ ಇಂಡಿಯಾ
Published On :
ನವದೆಹಲಿ: ಕೇಂದ್ರ ಸರ್ಕಾರಿ ಸಾಮ್ಯದ ಏರ್ ಇಂಡಿಯಾ ಖಾಸಗೀಕರಣಕ್ಕೆ ಮುಂದಾಗಿದ್ದ ಕೇಂದ್ರ ಸರ್ಕಾರ ಇದೀಗ ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಿಂದಾಗಿ ಹಿಂದೆ ಸರಿದಿದೆ. 
ಖಾಸಗೀಕರಣದಿಂದ ಹಿಂದೆ ಸರಿದಿರುವ ಕೇಂದ್ರ ಸರ್ಕಾರ ಸಂಸ್ಥೆಯ ಕಾರ್ಯಾಚರಣೆಗೆ ಅಗತ್ಯವಿರುವ ಆರ್ಥಿಕ ನೆರವು ನೀಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. 
ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದ್ದು ಸಭೆಯಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್, ನಾಗರಿಕ ಸಚಿವ ಸುರೇಶ್ ಪ್ರಭು, ಸಾರಿಗೆ ಸಚಿವ ನಿತಿನ್ ಗಡ್ಕರಿ ಸೇರಿದಂತೆ ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು ಎಂದು ವಿಮಾನಯಾನ ಸಚಿವಾಲಯದ ಮೂಲಗಳು ತಿಳಿಸಿವೆ. 
ಏರ್ ಇಂಡಿಯಾದ ಶೇಕಡ 76ರಷ್ಟು ಪಾಲನ್ನು ಮಾರಾಟ ಮಾಡಲು ಕೇಂದ್ರ ಸರ್ಕಾರ ಬಿಡ್ ಆಹ್ವಾನಿಸಿತ್ತು. ಆದರೆ, ಏರ್ ಇಂಡಿಯಾ ಖರೀದಿಗೆ ಯಾರೂ ಆಸಕ್ತಿ ತೋರಿಸಿರಲಿಲ್ಲ. ಇನ್ನು ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಪಾಲು ಮಾರಾಟ ಮಾಡದಿರಲು ನಿರ್ಧರಿಸಿದೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.