ಜಮ್ಮು-ಕಾಶ್ಮೀರ: ಅಮರನಾಥ ಯಾತ್ರೆ ವೇಳೆ ಹೈಅಲರ್ಟ್'ನಲ್ಲಿರಲು ಭದ್ರತಾ ಪಡೆಗಳಿಗೆ ಸೂಚನೆ
ಅಮರನಾಥ ಯಾತ್ರೆ ಭಾರೀ ಪ್ರಮಾಣದ ವಿಧ್ವಂಸಕ ಕೃತ್ಯವೆಸಗಲು ಉಗ್ರರು ಸಂಚು ರೂಪಿಸಿದ್ದು, ಈ ಹಿನ್ನಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಹೆಚ್ಚಿಸುವಂದೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ...

Published On :
ಶ್ರೀನಗರ; ಅಮರನಾಥ ಯಾತ್ರೆ ಭಾರೀ ಪ್ರಮಾಣದ ವಿಧ್ವಂಸಕ ಕೃತ್ಯವೆಸಗಲು ಉಗ್ರರು ಸಂಚು ರೂಪಿಸಿದ್ದು, ಈ ಹಿನ್ನಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಹೆಚ್ಚಿಸುವಂದೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.
ಉಗ್ರರು ದಾಳಿ ನಡೆಸಲು ಸಂಚು ರೂಪಿಸುತ್ತಿರು ಹಿನ್ನಲೆಯಲ್ಲಿ ಗಡಿಯಲ್ಲಿರುವ ಎಲ್ಲಾ ಪೊಲೀಸ್ ಠಾಣೆಗಳು, ಚೆಕ್ ಪೋಸ್ಟ್'ಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ, ಗಡಿಯಲ್ಲಿ ಅನುಮಾನಾಸ್ಪದ ಚಟುವಟಿಕೆಗಳು ಹಾಗೂ ಒಳನುಸುಳುವಿಕೆ ಕಂಡು ಬಂದ ಕೂಡಲೇ ಕಾರ್ಯಪ್ರವೃತ್ತರಾಗುವಂತೆಯೂ ತಿಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಜೂನ್ 28 ರಿಂದ ಹಿಮಾಲಯದ ತಪ್ಪಲಲ್ಲಿ ಇರುವ ಅಮರನಾಥ ದೇಗುಲಕ್ಕೆ ಯಾತ್ರೆ ಆರಂಭಗೊಳ್ಳಲಿದೆ. ಎರಡು ತಿಂಗಳುಗಳ ಕಾಲ ಯಾತ್ರೆ ನಡೆಯಲಿದ್ದು, ಆಗಸ್ಟ್ ಅಂತ್ಯದಲ್ಲಿ ಯಾತ್ರೆ ಅಂತ್ಯಗೊಳ್ಳಲಿದೆ.
ಕಳೆದ ಬಾರಿ ಕೂಡ ಅಮರನಾಥ ಯಾತ್ರೆ ವೇಳೆ ಉಗ್ರರು ದಾಳಿ ನಡೆಸಿದ್ದು. ಈ ರೀತಿಯ ದಾಳಿಗಳು ಪುನರಾವರ್ತನೆಯಾಗದಂತೆ ಎಚ್ಚರಿಕೆ ವಹಿಸಿರುವ ಕೇಂದ್ರ ಸರ್ಕಾರ ಭದ್ರತಾ ಕ್ರಮಗಳನ್ನು ಹೆಚ್ಚಿಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಜಮ್ಮು ಮತ್ತು ಕಾಶ್ಮೀರTerror AttackArmyJammu and Kashmirಭದ್ರತಾ ಪಡೆHigh alertsecurityಸೇನೆಉಗ್ರರ ದಾಳಿಹೈ ಅಲರ್ಟ್ಅಮರನಾಥ ಯಾತ್ರೆAmarnath Yatra
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


