ದೇಶ

ಟಿಎಂಸಿ ಮುಖಂಡರನ್ನು ಎನ್ ಕೌಂಟರ್ ಮಾಡಿ: ಪ.ಬಂಗಾಳ ಬಿಜೆಪಿ ಮುಖ್ಯಸ್ಥ

ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುವ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಅವರು ಬುಧವಾರ....

ಟಿಎಂಸಿ ಮುಖಂಡರನ್ನು ಎನ್ ಕೌಂಟರ್ ಮಾಡಿ: ಪ.ಬಂಗಾಳ ಬಿಜೆಪಿ ಮುಖ್ಯಸ್ಥ
ದಿಲೀಪ್ ಘೋಷ್
Published On :
ಕೋಲ್ಕತಾ: ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುವ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಅವರು ಬುಧವಾರ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದು, ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ ಹಾಕುವ ಟಿಎಂಸಿ ಮುಖಂಡರನ್ನು ಮತ್ತು ಅವರ ಬೆಂಬಲಿಗರನ್ನು ಎನ್ ಕೌಂಟರ್ ಮಾಡಬೇಕು ಎಂದಿದ್ದಾರೆ.
ಉತ್ತರ ಬಂಗಾಳದ ಜಲ್ಪೈಗುರಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಘೋಷ್, ಬಹಳಷ್ಟು ಟಿಎಂಸಿ ಮುಖಂಡರು ಮತ್ತು ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ ಹಾಕುತ್ತಿದ್ದಾರೆ. ಆದರೆ ಅವರು ಜೈಲಿಗೆ ಹೋಗುತ್ತಾರೆ ಇಲ್ಲವೆ ಎನ್ ಕೌಂಟರ್ ಆಗುತ್ತಾರೆ ಎಂದು ಎಚ್ಚರಿಸಿದ್ದಾರೆ.
'ಅವರು ನಮ್ಮ ಮೇಲೆ ದಾಳಿ ಮಾಡಿದರೂ ನಾವು ಅವರಿಗೆ ರಸಗುಲ್ಲ ನೀಡುತ್ತೇವೆ ಎಂದು ಟಿಎಂಸಿಗೆ ಬಾಂಡ್ ಬರೆದುಕೊಟ್ಟಿಲ್ಲ. ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ ನಡೆಸದಂತೆ ಎಚ್ಚರಿಕೆ ನೀಡುತ್ತಿದ್ದೇನೆ. ಆದಾಗ್ಯೂ ಮತ್ತೆ ದಾಳಿ ನಡೆಸಿದರು ಗುಂಡಿನ ಉತ್ತರ ನೀಡಬೇಕಾಗುತ್ತದೆ' ಎಂದು ಘೋಷ್ ಹೇಳಿದ್ದಾರೆ.
ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಘೋಷ್ ವಿರುದ್ಧ ಪಶ್ಚಿಮ ಬಂಗಾಳ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಇತ್ತೀಚಿಗೆ ನಡೆದ ಗ್ರಾಮ ಪಂಚಾಯತಿ ಚುನಾವಣೆ ವೇಳೆಯೂ ಘೋಷ್, ಟಿಎಂಸಿ ಕಾರ್ಯಕರ್ತರ ಮಕ್ಕಳು ಅನಾಥರಾಗುತ್ತಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.