ದೇಶ

ಅಮರನಾಥ ಯಾತ್ರೆ ನಂತರ ಜಮ್ಮು ಕಾಶ್ಮೀರಕ್ಕೆ ನೂತನ ರಾಜ್ಯಪಾಲರ ನೇಮಕ ಸಾಧ್ಯತೆ

ಅಮರನಾಥ ಯಾತ್ರೆಯ ನಂತರ ಜಮ್ಮು ಕಾಶ್ಮೀರಕ್ಕೆ ನೂತನ ರಾಜ್ಯಪಾಲರನ್ನು ನೇಮಕ ಮಾಡುವ ಸಾಧ್ಯತೆಯಿದೆ ಎಂದು ಜಮ್ಮು ಕಾಶ್ಮೀರ ಮಾಜಿ ಡಿಸಿಎಂ...

ಅಮರನಾಥ ಯಾತ್ರೆ ನಂತರ ಜಮ್ಮು ಕಾಶ್ಮೀರಕ್ಕೆ ನೂತನ ರಾಜ್ಯಪಾಲರ ನೇಮಕ ಸಾಧ್ಯತೆ
ಕಾವಿಂದರ್ ಗುಪ್ತಾ
Published On :
ಜಮ್ಮು: ಅಮರನಾಥ ಯಾತ್ರೆಯ ನಂತರ  ಜಮ್ಮು ಕಾಶ್ಮೀರಕ್ಕೆ ನೂತನ ರಾಜ್ಯಪಾಲರನ್ನು ನೇಮಕ ಮಾಡುವ ಸಾಧ್ಯತೆಯಿದೆ ಎಂದು ಜಮ್ಮು ಕಾಶ್ಮೀರ ಮಾಜಿ ಡಿಸಿಎಂ ಕಾವಿಂದರ್ ಗುಪ್ತಾ ಹೇಳಿದ್ದಾರೆ.
ಹೊಸ ರಾಜ್ಯಪಾಲರನ್ನು ನೇಮಕ ಮಾಡುವುದು ನಿಯಮವಾಗಿದೆ. ಕೇಂದ್ರ ಸರ್ಕಾರ ಇದರ ಬಗ್ಗೆ ಗಮನ ಹರಿಸಲಿದೆ ಎಂದು ಹೇಳಿದ್ದಾರೆ.  ಅಮರನಾಥ ಯಾತ್ರೆ ನಂತರ ಇದರ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಜೂನ್ 28 ರಂದು ಅಮರನಾಥ ಯಾತ್ರೆ ಆರಂಭವಾಗಲಿದ್ದು,  2 ತಿಂಗಳ ನಂತರ ಪೂರ್ಣಗೊಳ್ಳಲಿದೆ. 
2008 ರಲ್ಲಿ ಯುಪಿಎ ಸರ್ಕಾರ  ಎನ್ ಎನ್ ವೊಹ್ರಾ ಅವರನ್ನು ನೇಮಕ ಮಾಡಲಾಗಿತ್ತು. ಯುಪಿಎ ಸರ್ಕಾರ ನೇಮಿಸಿದ್ದ ಹಲವು ರಾಜ್ಯಪಾಲರು ಅಧಿಕಾರದಲ್ಲಿ ಮುಂದುವರಿದಿದ್ದಾರೆ. ಯಾವುದೇ ಹೊಸ ಸರ್ಕಾರ ರಚನೆಯಾಗುವ ಸಾಧ್ಯತೆಯಿಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.