ಜಮ್ಮು-ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ: ಹಿರಿಯ ಆಡಳಿತಾಧಿಕಾರಿಗಳು, ಭದ್ರತಾಪಡೆಗಳೊಂದಿಗೆ ವೊಹ್ರಾ ಸಭೆ
ಪಿಡಿಪಿಗೆ ನೀಡಿದ್ದ ಬೆಂಬಲವನ್ನು ಬಿಜೆಪಿ ಹಿಂದಕ್ಕೆ ಪಡೆದ ಹಿನ್ನಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಹೇರಿದ ಬೆನ್ನಲ್ಲೇ, ರಾಜ್ಯಪಾಲ ಎನ್ಎನ್ ವೊಹ್ರಾ ಅವರು ಹಿರಿಯ ಆಡಳಿತಾಧಿಕಾರಿಗಳು ಹಾಗೂ ಭದ್ರತಾ ಪಡೆಗಳೊಂದಿಗೆ...

Published On :
ಶ್ರೀನಗರ; ಪಿಡಿಪಿಗೆ ನೀಡಿದ್ದ ಬೆಂಬಲವನ್ನು ಬಿಜೆಪಿ ಹಿಂದಕ್ಕೆ ಪಡೆದ ಹಿನ್ನಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಹೇರಿದ ಬೆನ್ನಲ್ಲೇ, ರಾಜ್ಯಪಾಲ ಎನ್ಎನ್ ವೊಹ್ರಾ ಅವರು ಹಿರಿಯ ಆಡಳಿತಾಧಿಕಾರಿಗಳು ಹಾಗೂ ಭದ್ರತಾ ಪಡೆಗಳೊಂದಿಗೆ ಸಭೆ ನಡೆಸುತ್ತಿದ್ದಾರೆಂದು ಬುಧವಾರ ತಿಳಿದುಬಂದಿದೆ.
ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಲ್ಲಿ ಸಭೆ ನಡೆಸುತ್ತಿರುವ ರಾಜ್ಯಪಾಲರು, ಕಾಶ್ಮೀರದಲ್ಲಿನ ಪರಿಸ್ಥಿತಿ, ಭದ್ರತೆ ಹಾಗೂ ಆಡಳಿತದ ಕುರಿತಂತೆ ಚರ್ಚೆ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ.
ಪ್ರತಿಪಕ್ಷಗಳಿಂದ ಅಪವಿತ್ರ ಮೈತ್ರಿ ಎಂದೇ ಕರೆಯಲ್ಪಡುತ್ತಿದ್ದ ಹಾಗೂ ಕಣಿವೆ ರಾಜ್ಯದಲ್ಲಿ ನಡೆಯುತ್ತಿದ್ದ ವ್ಯಾಪಕ/ಹಿಂಸೆ/ಭಯೋತ್ಪಾದಕ ಚಟುವಟಿಕೆಗಳಿಂದ ತೀವ್ರ ಟೀಕೆಗೆ ಟೀಕೆಗೆ ಗುರಿಯಾಗಿದ್ದ ಜಮ್ಮು-ಕಾಶ್ಮೀರದ ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರ ಪತನಗೊಂಡಿದ್ದು, ರಾಜ್ಯಪಾಲರ ಆಡಳಿತವನ್ನು ಹೇರಲಾಗಿದೆ.
ರಾಜ್ಯದಲ್ಲಿ ಉಗ್ರವಾದ ಮಿತಿಮೀರಿದ್ದು, ರಾಜ್ಯದಲ್ಲಿನ ಪರಿಸ್ಥಿತಿ ಅಸಹನೀಯವಾಗಿದೆ ಎಂದು ಬಿಜೆಪಿ ನಿನ್ನೆಯಷ್ಟೇ ದಿಢೀರನೇ ಬೆಂಬಲ ವಾಪಸ್ ಪಡೆದುಕೊಂಡಿತ್ತು. ಇದರಂತೆ 4 ವರ್ಷಗಳ ಹಳೆಯ ದೋಸ್ತಿ ಸರ್ಕಾರದ ಆಳ್ವಿಕೆ ಅಂತ್ಯಗೊಂಡಿದೆ. ಅಲ್ಲದೆ, ಯಾವುದೇ ಇತರೆ ಪಕ್ಷಗಳು ಹೊಂದಾಣಿಕೆಗೆ ಮುಂದಾಗದ ಕಾರಣ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜ್ಯಪಾಲರ ಆಳ್ವಿಕೆಯನ್ನು ಹೇರಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


