ರಾಜಕೀಯ ಬಿಕ್ಕಟ್ಟು ಸೇನಾ ಪಡೆಗಳ ಕಾರ್ಯಾಚರಣೆ ಮೇಲೆ ಪರಿಣಾಮ ಬೀರಲ್ಲ; ಭದ್ರತಾಧಿಕಾರಿಗಳು
ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿ-ಬಿಜೆಪಿ ನಡುವಿನ ಮೈತ್ರಿ ಮುರಿದು ಬಿದ್ದಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ರಾಜ್ಯಪಾಲರ ಆಡಳಿತವನ್ನು ಹೇರಲಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಎದುರಾಗಿರುವ ರಾಜಕೀಯ ಬಿಕ್ಕಟ್ಟುಗಳು ರಾಜ್ಯದಲ್ಲಿ ಸೇನಾ ಪಡೆಗಳು ನಡೆಸುತ್ತಿರುವ...

Published On :
ಶ್ರೀನಗರ; ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿ-ಬಿಜೆಪಿ ನಡುವಿನ ಮೈತ್ರಿ ಮುರಿದು ಬಿದ್ದಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ರಾಜ್ಯಪಾಲರ ಆಡಳಿತವನ್ನು ಹೇರಲಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಎದುರಾಗಿರುವ ರಾಜಕೀಯ ಬಿಕ್ಕಟ್ಟುಗಳು ರಾಜ್ಯದಲ್ಲಿ ಸೇನಾ ಪಡೆಗಳು ನಡೆಸುತ್ತಿರುವ ಕಾರ್ಯಾಚರಣೆಗಳ ಮೇಲೆ ಯಾವುದೇ ರೀತಿಯ ಪರಿಣಾಮವನ್ನು ಬೀರುವುದಿಲ್ಲ ಎಂದು ಭದ್ರತಾಧಿಕಾರಿಗಳು ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಹಿರಿಯ ಭದ್ರತಾಧಿಕಾರಿಯೊಬ್ಬರು, ರಾಜ್ಯದಲ್ಲಿ ಸೇನಾಪಡೆಗಳು ನಡೆಸುತ್ತಿರುವ ಕಾರ್ಯಾಚರಣೆ ಎಂದಿನಂತೆಯೇ ಮುಂದುವರೆಯಲಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಸರ್ಕಾರ ಮುರಿದು ಬಿದ್ದರೂ, ಅದು ಭದ್ರತಾ ಪಡೆಗಳ ಕಾರ್ಯಾಚರಣೆ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದಾರೆ.
ಭದ್ರತಾ ಪಡೆಗಳು ಕಾನೂನಿ ಅಡಿಯಲ್ಲಿ ಕಾರ್ಯನಿರ್ವಹಿಸಬೇಕಿರುತ್ತದೆ. ಪ್ರತೀಯೊಂದು ಕಾರ್ಯಾಚರಣೆಯೂ ಕಾನೂನಿನಂತೆಯೇ ನಡೆಸಲಾಗುತ್ತದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಪಕ್ಷ ಆಡಳಿತ ನಡೆಸಲಿ ಅಥವಾ ರಾಜ್ಯಪಾಲರೇ ಆಡಳಿತ ನಡೆಸಿದರೂ ನಮ್ಮ ಕಾರ್ಯಾಚರಣೆಗಳ ಮೇಲೆ ಅದರ ಇರುವುದಿಲ್ಲ.
ರಂಜಾನ್ ಕದನ ವಿರಾಮದ ಬಳಿಕ ಉಗ್ರರ ವಿರುದ್ಧದ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ. ಈ ಕಾರ್ಯಾಚರಣೆ ಎಂದಿನಂತೆಯೇ ಮುಂದುವರೆಯಲಿದೆ. ಗುಪ್ತಚರ ಇಲಾಖೆಯ ಮಾಹಿತಿಯನ್ವಯ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದೇವೆಂದು ತಿಳಿಸಿದ್ದಾರೆ.
ಮತ್ತೊಬ್ಬ ಭದ್ರತಾಧಿಕಾರಿ ಮಾತನಾಡಿ, ಪರಿಸ್ಥಿತಿ, ಅಗತ್ಯಕ್ಕನುಗುಣವಾಗಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕದನ ವಿರಾಮ ಅಂತಿಮಗೊಂಡಿದ್ದು, ಉಗ್ರರ ವಿರುದ್ಧದ ಕಾರ್ಯಾಚರಣೆಗಳು ಮತ್ತೆ ಆರಂಭಗೊಂಡಿವೆ. ನಾಗರೀಕ ಸರ್ಕಾರದ ಆಡಳಿತವೇ ಆಗಲೀ ಅಥವಾ ರಾಜ್ಯಪಾಲರ ಆಡಳಿತವೇ ಆಗಲಿ, ನಮ್ಮ ಕಾರ್ಯಾಚರಣೆ ಮುಂದುವರೆಯಲಿದೆ. ಯಾವುದೇ ಸರ್ಕಾರಕ್ಕಿಂತಲೂ ದೇಶದ ಭದ್ರತೆ ಅತ್ಯಂತ ಮುಖ್ಯವಾಗುತ್ತದೆ ಎಂದಿದ್ದಾರೆ.
ಈ ನಡುವೆ ಪುಲ್ವಾಮ ಜಿಲ್ಲೆಯ ಟ್ರಾಲ್ ನಲ್ಲಿ ಉಗ್ರರು ಅಡಗಿ ಕುಳಿತಿರುವುದಾಗಿ ಗುಪ್ತಚರ ಇಲಾಖೆ ಮಾಹಿತಿ ನೀಡಿದ್ದು, ಸಿಆರ್'ಪಿಎಫ್ ಹಾಗೂ ಸೇನಾ ಪಡೆಗಳು ಕಾರ್ಯಾಚರಣೆಯನ್ನು ಆರಂಭಿಸಿವೆ.
ಸ್ಥಳದಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದ್ದು, ಇಬ್ಬರು ಉಗ್ರರನ್ನು ಸೇನಾಪಡೆಗಳು ಸದೆಬಡಿದಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿಜಮ್ಮು ಮತ್ತು ಕಾಶ್ಮೀರPDPಪಿಡಿಪಿJammu and Kashmirಭದ್ರತಾ ಪಡೆಕಾರ್ಯಾಚರಣೆallianceಮೈತ್ರಿರಾಜಕೀಯ ಬಿಕ್ಕಟ್ಟುPolitical upheavalSecurity operations
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


