ಸುಳ್ಳು ಸುದ್ದಿ ಕಂಡು ಹಿಡಿಯುವ ಕುರಿತು ಗೂಗಲ್ ನಿಂದ ತರಬೇತಿ!
ಮಾಹಿತಿ ತಂತ್ರಜ್ಞಾನ ವಲಯದ ದೈತ್ಯ ಕಂಪನಿಯಾದ ಗೂಗಲ್ ಈಗ ಸಮಾಜದಲ್ಲಿ ಅಶಾಂತಿ ಮೂಡಿಸುತ್ತಿರುವ ಸುಳ್ಳು ಸುದ್ದಿಗಳಿಗೆ ಲಗಾಮು ಹಾಕಲು ಮುಂದಾಗಿದೆ. ಈ ಸಂಬಂಧ ಪತ್ರಕರ್ತರಿಗೆ ತರಬೇತಿ ನೀಡಲು ಮುಂದಾಗಿದೆ...

Published On :
ನವದೆಹಲಿ: ಮಾಹಿತಿ ತಂತ್ರಜ್ಞಾನ ವಲಯದ ದೈತ್ಯ ಕಂಪನಿಯಾದ ಗೂಗಲ್ ಈಗ ಸಮಾಜದಲ್ಲಿ ಅಶಾಂತಿ ಮೂಡಿಸುತ್ತಿರುವ ಸುಳ್ಳು ಸುದ್ದಿಗಳಿಗೆ ಲಗಾಮು ಹಾಕಲು ಮುಂದಾಗಿದೆ. ಈ ಸಂಬಂಧ ಪತ್ರಕರ್ತರಿಗೆ ತರಬೇತಿ ನೀಡಲು ಮುಂದಾಗಿದೆ.
ಮುಂದಿನ ಒಂದು ವರ್ಷದಲ್ಲಿ 8 ಸಾವಿರ ಇಂಗ್ಲೀಷ್ ಹಾಗೂ ಕನ್ನಡ ಸೇರಿದಂತೆ ಒಟ್ಟು 6 ಭಾರತೀಯ ಭಾಷೆಗಳ ಪತ್ರಕರ್ತರಿಗೆ ಸುಳ್ಳು ಸುದ್ದಿಗಳ ಬಗ್ಗೆ ಮುಂದಿನ 1 ವರ್ಷದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ಗೂಗಲ್ ತಿಳಿಸಿದೆ.
ಮೊದಲ ಹಂತವಾಗಿ ದೇಶದ ವಿವಿಧ ಭಾಗಗಳಲ್ಲಿನ 200 ಪತ್ರಕರ್ತರನ್ನು ಆಯ್ಕೆ ಮಾಡಲಾಗುತ್ತದೆ. ಕನ್ನಡ, ತಮಿಳು, ತೆಲುಗು, ಬಂಗಾಳಿ, ಮರಾಠಿ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ದಿನಗಳ ತರಬೇತಿ ನೀಡಲಾಗುತ್ತದೆ ಎಂದು ಗೂಗಲ್ ತಿಳಿಸಿದೆ.
ತರಬೇತಿ ಪಡೆದ ಈ 200 ಪತ್ರಕರ್ತರು ಮುಂದಿನ ದಿನಗಳಲ್ಲಿ ಇತರೆ ಪತ್ರಕರ್ತರಿಗೆ ತರಬೇತಿ ನೀಡಲಿದ್ದಾರೆ. ಸುಳ್ಳು ಸುದ್ದಿಗಳನ್ನು ಕಂಡು ಹಿಡಿಯುವುದು ಹೇಗೆ, ಅವನ್ನು ಪರಾಮರ್ಶಿಸುವುದು ಹೇಗೆ ಎಂಬ ಬಗ್ಗೆ ಗೂಗಲ್ ತರಬೇತಿ ನೀಡಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


