4ನೇ ಅಂತರಾಷ್ಟ್ರೀಯ ಯೋಗ ದಿನ: ಪ್ರಧಾನಿ ಮೋದಿ, ಮಾಜಿ ಪ್ರಧಾನಿ ದೇವೇಗೌಡರಿಂದ 'ಯೋಗ'
ದೇಶಾದ್ಯಂತ ಗುರುವಾರ 4ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಉತ್ತರಾಖಂಡದ ಡೆಹ್ರಾಡೂನ್ ನಲ್ಲಿರುವ ಅರಣ್ಯ...

ನವದೆಹಲಿ: ದೇಶಾದ್ಯಂತ ಗುರುವಾರ 4ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಉತ್ತರಾಖಂಡದ ಡೆಹ್ರಾಡೂನ್ ನಲ್ಲಿರುವ ಅರಣ್ಯ ಸಂಶೋಧನೆ ಸಂಸ್ಥೆಯಲ್ಲಿ ಸುಮಾರು 50,000 ಕಾರ್ಯಕರ್ತರೊಂದಿಗೆ ಯೋಗ ಮಾಡುತ್ತಿದ್ದಾರೆ.
ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ತಮ್ಮ ನಿವಾಸದಲ್ಲಿ ಇಂದು ಬೆಳಗ್ಗೆಯಿಂದಲೇ ವಿವಿಧ ಆಸನಗಳನ್ನು ಮಾಡುತ್ತಿದ್ದಾರೆ. 87ರ ಈ ಇಳಿ ವಯಸ್ಸಿನಲ್ಲಿ ಕೂಡ ಅವರು ಯೋಗ ಗುರುಗಳ ಮಾರ್ಗದರ್ಶನದಲ್ಲಿ ವಿವಿಧ ದೈಹಿಕ ಕಸರತ್ತುಗಳಲ್ಲಿ ಭಾಗವಹಿಸಿ ಅನೇಕ ಮಂದಿಗೆ ಮಾದರಿ ಮತ್ತು ಸ್ಪೂರ್ತಿಯಾಗಿದ್ದಾರೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯೋಗ ದಿನ ಕಾರ್ಯಕ್ರಮ ನಡೆಸುತ್ತಿದ್ದು ವಿವಿಧ ಯೋಗ ಗುರುಗಳು, ಸರ್ಕಾರದ ಸಚಿವರು ಕೂಡ ಯೋಗ ದಿನ ಕಾರ್ಯಕ್ರಮದಲ್ಲಿ ತೊಡಗಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಯೋಗಾಭ್ಯಾಸದಲ್ಲಿ ನಿರತರಾಗಿದ್ದಾರೆ.
ರಾಷ್ಟ್ರಪತಿ, ಉಪ ರಾಷ್ಟ್ರಪತಿ, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸೆಲೆಬ್ರಿಟಿಗಳು, ಗಣ್ಯವ್ಯಕ್ತಿಗಳು, ಸೇನಾ ಯೋಧರು ದೇಶದ ಮೂಲೆ ಮೂಲೆಗಳಲ್ಲಿ ವಿವಿಧ ಯೋಗಾಭ್ಯಾಸಗಳಲ್ಲಿ ಇಂದು ಬೆಳಗ್ಗೆಯಿಂದಲೇ ನಿರತರಾಗಿದ್ದಾರೆ.
#WATCH: PM Modi leads #InternationalYogaDay2018 celebrations at Forest Research Institute in Dehradun, Uttarakhand. https://t.co/Egy1o14OBD
— ANI (@ANI) June 21, 2018
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


