ರಾಜಕೀಯ ಲಾಭಕ್ಕಾಗಿ ಮೋದಿಯಿಂದ ಯೋಗಕ್ಕೆ ಉತ್ತೇಜನ, ಯೋಗದಿಂದ ಆರ್ಥಿಕತೆ ಸುಧಾರಣೆಯಾಗಲ್ಲ: ಕಾಂಗ್ರೆಸ್
ದೇಶಾದ್ಯಂತ ಅಂತಾರಾಷ್ಟ್ರೀಯ ಯೋಗದಿನಾಚರಣೆ ನಡೆದಿದ್ದರೆ, ಕಾಂಗ್ರೆಸ್ ಮಾತ್ರ ಈ ವಿಷಯದಲ್ಲಿಯೂ ಮೋದಿ ವಿರುದ್ಧ ಆರೋಪ ಮಾಡುವ ಅಂಶವನ್ನು ಕಂಡುಕೊಂಡಿದೆ.

Published On :
ನವದೆಹಲಿ: ದೇಶಾದ್ಯಂತ ಅಂತಾರಾಷ್ಟ್ರೀಯ ಯೋಗದಿನಾಚರಣೆ ನಡೆದಿದ್ದರೆ, ಕಾಂಗ್ರೆಸ್ ಮಾತ್ರ ಈ ವಿಷಯದಲ್ಲಿಯೂ ಮೋದಿ ವಿರುದ್ಧ ಆರೋಪ ಮಾಡುವ ಅಂಶವನ್ನು ಕಂಡುಕೊಂಡಿದೆ.
ಯೋಗಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಉದ್ದೇಶ ಶುದ್ಧಿಯನ್ನು ಕಾಂಗ್ರೆಸ್ ಪ್ರಶ್ನಿಸಿದ್ದು, ಮೋದಿ ಕೇವಲ ರಾಜಕೀಯ ಲಾಭಕ್ಕಾಗಿ ಯೋಗವನ್ನು ಉತ್ತೇಜಿಸುತ್ತಿದ್ದಾರೆ ಎಂದು ಆರೋಪಿಸಿದೆ. ಯೋಗ ದೇಶದ ಆರ್ಥಿಕತೆಯನ್ನು ಉತ್ತಮಗೊಳಿಸುವುದಿಲ್ಲ, ಅಷ್ಟೇ ಅಲ್ಲದೇ ಬಿಜೆಪಿ ಮತ್ತು ಮೋದಿ ಒಡೆಯುತ್ತಿರುವ ಸಮಾಜ ಯೋಗದಿಂದ ಒಟ್ಟುಗೂಡುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದೆ.
ಮೋದಿ ಹಾಗೂ ಅವರ ಪಕ್ಷ ಸಮಾಜವನ್ನು ಒಡೆಯುತ್ತಿದ್ದಾರೆ. ಯೋಗದ ಮೂಲಕ ಅದನ್ನು ಗುಣಪಡಿಸುವುದಕ್ಕೆ ಸಾಧ್ಯವಿಲ್ಲ, ಯೋಗದಿಂದ ನಿಮ್ಮ ದೇಹದ ಸ್ವಾಸ್ಥ್ಯ ಕಾಪಾಡಿಕೊಳ್ಳುವುದಕ್ಕೆ ಸಾಧ್ಯ, ಸಮಾಜದ ಸ್ವಾಸ್ಥ್ಯವನ್ನು ಕಾಪಾಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ವಕ್ತಾರ ಪ್ರಮೋದ್ ತಿವಾರಿ ಹೇಳಿದ್ದಾರೆ.
ಮೋದಿ ಸಮಾಜದ ಸ್ವಾಸ್ಥ್ಯವನ್ನು ಬಯಸುತ್ತಿದ್ದರೆ ಅವರು ತಮ್ಮ ಕಾರ್ಯವಿಧಾನವನ್ನು ಬದಲಾವಣೆ ಮಾಡಿಕೊಳ್ಳಬೇಕು ಎಂದು ಪ್ರಮೋದ್ ತಿವಾರಿ ಸಲಹೆ ನೀಡಿದ್ದಾರೆ. ಯೋಗದ ಮೊತ್ತ ಮೊದಲ ಅಂಶವೇ ಅದನ್ನು ಪ್ರದರ್ಶನಕ್ಕಿಡಬಾರದೆಂಬುದಾಗಿದೆ, ಯೋಗಾಭ್ಯಾಸ ಖಾಸಗಿ ವಿಷಯವಾಗಿರಬೇಕು, ಆದರೆ ಮೋದಿ ಈ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಯೋಗವನ್ನು ಮೋದಿ ಉತ್ತೇಜಿಸಲು ಆದರೆ ಮೋದಿ ಆ ಕೆಲಸವನ್ನು ಸರಿಯಾದ ಉದ್ದೇಶದಿಂದ ಮಾಡುತ್ತಿಲ್ಲ, ಕೇವಲ ರಾಜಕೀಯಕ್ಕಾಗಿ ಮಾಡುತ್ತಿದ್ದಾರೆ ಎಂದು ತಿವಾರಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


