ಭೋಪಾಲ್: 65 ವರ್ಷದ ದಲಿತ ರೈತನ ಸಜೀವ ದಹನ: ನಾಲ್ವರ ಬಂಧನ
62 ವರ್ಷದ ದಲಿತ ರೈತನನ್ನು ಸಜೀವ ದಹನ ಮಾಡಿರುವ ಘಟನೆ ಭೋಪಾಲ್ ನಲ್ಲಿ ನಡೆದಿದ್ದು, ಒಂದೇ ಕುಟುಂಬದ ನಾಲ್ವರನ್ನು ಬಂಧಿಸಲಾಗಿದೆ.

Published On :
ಭೋಪಾಲ್: 62 ವರ್ಷದ ದಲಿತ ರೈತನನ್ನು ಸಜೀವ ದಹನ ಮಾಡಿರುವ ಘಟನೆ ಭೋಪಾಲ್ ನಲ್ಲಿ ನಡೆದಿದ್ದು, ಒಂದೇ ಕುಟುಂಬದ ನಾಲ್ವರನ್ನು ಬಂಧಿಸಲಾಗಿದೆ.
ಭೋಪಾಲ್ ನಿಂದ 70 ಕಿಮೀ ದೂರದಲ್ಲಿರುವ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಸಹಾಯಕಳಾಗಿದ್ದ ಪತ್ನಿಯ ಎದುರೇ ಕಿಶೋರಿಲಾಲ್ ಜತವ್ ನ್ನು ಸಜೀವದಹನ ಮಾಡಲಾಗಿದೆ. ರೈತನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆತನನ್ನು ಬದುಕಿಸಲು ಸಾಧ್ಯವಾಗಲಿಲ್ಲ.
ಭೋಪಾಲ್ ಉತ್ತರ ಭಾಗದ ಎಸ್ ಪಿ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ರೈತನನ್ನು ಹತ್ಯೆ ಮಾಡಿದ ತಿರನ್ ಸಿಂಗ್ ಯಾದವ್ ಆತನ ಪುತ್ರ ಪ್ರಕಾಶ್, ಇಬ್ಬರು ಸಂಬಂಧಿಕರಾದ ಸಂಜು ಹಾಗೂ ಬಲ್ಬೀರ್ ರನ್ನು ಗುರುವಾರ ರಾತ್ರಿ ಬಂಧಿಸಲಾಗಿದ್ದು ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಕಿಶೋರಿಲಾಲ್ ಕುಟುಂಬದವರು ಹಲವು ವರ್ಷಗಳಿಂದ ಕೃಷಿ ಮಾಡುತ್ತಿದ್ದ ಭೂಮಿಯಲ್ಲಿ ಯಾದವ್ ಹಾಗೂ ಇತರ ನಾಲ್ಕು ಮಂದಿ ಟ್ರಾಕ್ಟರ್ ನಲ್ಲಿ ಉಳುಮೆ ಮಾಡಿದ್ದನ್ನು ಕಂಡ ಕಿಶೋರಿಲಾಲ್ ಅದನ್ನು ತಡೆಯಲು ಯತ್ನಿಸಿದ್ದಾರೆ. ಈ ವೇಳೆ ಕಿಶೋರಿ ಲಾಲ್ ಮೇಲೆ ಹಲ್ಲೆ ನಡೆದಿದ್ದು, ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ. ಈ ಘಟನೆ ಕಿಶೋರಿಲಾಲ್ ರ ಪತ್ನಿ ಎದುರೇ ನಡೆದಿದ್ದು ಅಸಹಾಯಕಳಾಗಿದ್ದ ಪತ್ನಿ ಕುಟುಂಬ ಸದಸ್ಯರಿಗೆ ಹಾಗೂ ನೆರೆಯವರಿಗೆ ವಿಷಯ ಮುಟ್ಟಿಸಿದ್ದಾರೆ. ಎಲ್ಲಾ ಪ್ರಯತ್ನಗಳ ನಡುವೆಯೂ ಕಿಶೋರಿಲಾಲ್ ನ್ನು ಉಳಿಸಿಕೊಳ್ಳುವುದು ಸಾಧ್ಯವಾಗಲಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


