ಬಸ್ ಗೆ ಆಟೋ ಡಿಕ್ಕಿ: 9 ಮಂದಿ ದಾರುಣ ಸಾವು
ಸರ್ಕಾರಿ ಬಸ್ಸೊಂದಕ್ಕೆ ಆಟೋ ರಿಕ್ಷಾ ಢಿಕ್ಕಿಯಾಗಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 4 ಮಂದಿ...

Published On :
ವಿಜಯವಾಡ: ಸರ್ಕಾರಿ ಬಸ್ಸೊಂದಕ್ಕೆ ಆಟೋ ರಿಕ್ಷಾ ಢಿಕ್ಕಿಯಾಗಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 4 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದ ತೀವ್ರತೆಗೆ 7 ಮಂದಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದರೆ, ಮತ್ತಿಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ರಿಕ್ಷಾದಲ್ಲಿ ಮಹಿಳೆಯರು ಮತ್ತು ಅನಾರೋಗ್ಯಕ್ಕೀಡಾದವರು ನಾಟಿ ಔಷಧಿ ತರಲೆಂದು ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.
ಕರ್ನೂಲು -ನಂದ್ಯಾಲ್ ಹೆದ್ದಾರಿಯ ಸೋಮಯಾಜುಪಲ್ಲೆ ಬಳಿ ಅಪಘಾತ ಸಂಭವಿಸಿದ್ದು, ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆಟೋದಲ್ಲಿ 13 ಮಂದಿ ಪ್ರಯಾಣಿಸುತ್ತಿದ್ದರು, ಆಟೋ ಚಾಲಕ ತಪ್ಪು ದಾರಿಯಲ್ಲಿ ಬರುತ್ತಿತ್ತು ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


