8 ಸಿಮಿ ಉಗ್ರರ ಎನ್ಕೌಂಟರ್: ನ್ಯಾಯಾಂಗ ಆಯೋಗದಿಂದ ಮಧ್ಯಪ್ರದೇಶ ಪೊಲೀಸರಿಗೆ ಕ್ಲೀನ್ ಚಿಟ್
2016ರಲ್ಲಿ ಭೋಪಾಲ್ ಸೆಂಟ್ರಲ್ ಜೈಲಿನಿಂದ ಪರಾರಿಯಾಗಿದ್ದ ಎಂಟು ಶಂಕಿತ ಸಿಮಿ ಉಗ್ರರ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಪೊಲೀಸರಿಗೆ ಕ್ಲೀನ್ ಚಿಟ್ ಸಿಕ್ಕಿದೆ...

Published On :
ಭೋಪಾಲ್(ಮಧ್ಯಪ್ರದೇಶ): 2016ರಲ್ಲಿ ಭೋಪಾಲ್ ಸೆಂಟ್ರಲ್ ಜೈಲಿನಿಂದ ಪರಾರಿಯಾಗಿದ್ದ ಎಂಟು ಶಂಕಿತ ಸಿಮಿ ಉಗ್ರರ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಪೊಲೀಸರಿಗೆ ಕ್ಲೀನ್ ಚಿಟ್ ಸಿಕ್ಕಿದೆ.
ಸ್ಟೂಡೆಂಟ್ ಇಸ್ಲಾಮಿಕ್ ಮೂವ್ವೆಂಟ್ ಆಫ್ ಇಂಡಿಯಾ(ಸಿಮಿ) ಸಂಘಟನೆಯ ಎಂಟು ಮಂದಿ ಶಂಕಿತ ಉಗ್ರರು 2016ರ ಅಕ್ಟೋಬರ್ 30ರ ರಾತ್ರಿ ಜೈಲು ಸಿಬ್ಬಂದಿಯೋರ್ವರನ್ನು ಹತ್ಯೆ ಮಾಡಿ ಜೈಲಿನಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದರು. ಮಾರನೇ ದಿನ ಶಂಕಿತ ಉಗ್ರರನ್ನು ಎನ್ಕೌಂಟರ್ ಮಾಡಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಈ ಹಿನ್ನೆಲೆಯಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು.
ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಎಸ್ ಕೆ ಪಾಂಡೆ ಅವರನ್ನೊಳಗೊಂಡ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು ಮಧ್ಯಪ್ರದೇಶದ ಪೊಲೀಸರಿಗೆ ಕ್ಲೀನ್ ಚಿಟ್ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Bhopalಭೋಪಾಲ್Madhya Pradesh PoliceSIMI encounter caseJudicial commissionಸಿಮಿ ಎನ್ ಕೌಂಟರ್ಮಧ್ಯ ಪ್ರದೇಶ ಪೊಲೀಸ್ನ್ಯಾಯಾಂಗ ಆಯೋಗ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


