ಇಂದಿರಾ ಗಾಂಧಿಯನ್ನು ಹಿಟ್ಲರ್ ಗೆ ಹೋಲಿಸಿದ ಅರುಣ್ ಜೇಟ್ಲಿ
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಅವರನ್ನು ಜರ್ಮನಿಯ ಸರ್ವಾಧಿಕಾರಿ....

Published On :
ನವದೆಹಲಿ: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಅವರನ್ನು ಜರ್ಮನಿಯ ಸರ್ವಾಧಿಕಾರಿ ಅಡೊಲ್ಫ್ ಹಿಟ್ಲರ್ ಗೆ ಹೋಲಿಸಿದ್ದು, ಇಂದಿರಾ ಗಾಂಧಿ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರುವ ಮೂಲಕ ಪ್ರಜಾಪ್ರಭುತ್ವವನ್ನು ಸಾಂವಿಧಾನಿಕ ಸರ್ವಾಧಿಕಾರವಾಗಿ ಪರಿವರ್ತಿಸಿದ್ದರು ಎಂದು ಆರೋಪಿಸಿದ್ದಾರೆ.
1975ರ ಜೂನ್ 25ರಂದು ತುರ್ತು ಪರಿಸ್ಥಿತಿಯ ಕರಾಳ ದಿನಗಳ ಕುರಿತು ತಮ್ಮ ಫೇಸ್ ಬುಕ್ ನಲ್ಲಿ ಸುಧೀರ್ಘವಾಗಿ ಮೂರು ಭಾಗಗಳಲ್ಲಿ ಪ್ರಕಟಿಸುತ್ತಿರುವ ಅರುಣ್ ಜೇಟ್ಲಿ ಅವರು, ಮೊದಲನೇ ಭಾಗವನ್ನು ಭಾನುವಾರ ಹಾಗೂ ಎರಡನೇ ಭಾಗವನ್ನು ಸೋಮವಾರ ಪ್ರಕಟಗೊಳಿಸಿದ್ದಾರೆ. ಮೂರನೇ ಭಾಗ ಪ್ರಕಟವಾಗಬೇಕಾಗಿದ್ದು, ಇದರಲ್ಲಿನ ಪ್ರಮುಖ ಅಂಶಗಳನ್ನು ತಮ್ಮ ಟ್ಟಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಎರಡನೇ ಭಾಗದಲ್ಲಿ ಇಂದಿರಾ ಗಾಂಧಿ ಮತ್ತು ಹಿಟ್ಲರ್ ಸಂವಿಧಾನವನ್ನು ರದ್ದುಗೊಳಿಸಲಿಲ್ಲ. ಅವರು ಪ್ರಜಾಪ್ರಭುತ್ವವನ್ನು ಸರ್ವಾಧಿಕಾರವನ್ನಾಗಿ ರೂಪಿಸಲು ಸಂವಿಧಾನವನ್ನೇ ಬಳಸಿಕೊಂಡಿದ್ದರು ಎಂದು ಜೇಟ್ಲಿ ಉಲ್ಲೇಖಿಸಿದ್ದಾರೆ.
1975ರ ಜೂನ್ 25ರಂದು ಪ್ರತಿಪಕ್ಷಗಳು ದೇಶದಲ್ಲಿ ಅಸ್ಥಿರತೆ ಸೃಷ್ಟಿಸಲು ಸಂಚು ಹೂಡಿವೆ ಎಂದು ವಾದಮಾಡಿ, ಸಂವಿಧಾನದ ವಿಧಿ 352ರ ಅಡಿಯಲ್ಲಿ ಇಂದಿರಾ ಗಾಂಧಿಯವರು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದರು. ಇದು ಹಿಟ್ಲರ್ ಧೋರಣೆಯ ಅನುಕರಣೆಯಾಗಿತ್ತು. ಹಿಟ್ಲರ್ ತನ್ನ ಅಧಿಕಾರದಲ್ಲಿ ಸಂಸತ್‍ನ ಬಹುತೇಕ ಪ್ರತಿಪಕ್ಷ ನಾಯಕರನ್ನು ಬಂಧಿಸಿ, ಕಡಿಮೆ ಸಂಖ್ಯಾಬಲ ಹೊಂದಿದ್ದ ಸರ್ಕಾರವನ್ನು 2/3 ಬಹುಮತದ ಸರ್ಕಾರವನ್ನಾಗಿ ಪರಿವರ್ತಿಸಿದ್ದು ಇದೇ ರೀತಿ ಇಂದಿರಾ ಗಾಂಧಿಯವರು ಸಂಚು ರೂಪಿಸಿದ್ದರು ಎಂದು ಕೇಂದ್ರ ಸಚಿವರು ತಮ್ಮ ಬರಹದಲ್ಲಿ ಆರೋಪಿಸಿದ್ದಾರೆ.
ಇಂದಿರಾ ಗಾಂಧಿ ಅವರು ಕಾನೂನಿನಲ್ಲಿ ಬದಲಾವಣೆ ಮಾಡುವ ಮೂಲಕ ಅಮಾನ್ಯ ಚುನಾವಣೆಯನ್ನು ಮಾನ್ಯ ಮಾಡುವುದಕ್ಕೋಸ್ಕರ ಪ್ರಜಾಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ತಂದಿದ್ದರು. ಭಾರತವನ್ನು ವಂಶಾಡಳಿತಕ್ಕೆ ಒಳಪಡಿಸಲು ಇಂದಿರಾ ಗಾಂಧಿ ಮುಂದಾಗಿದ್ದರು ಎಂದು ಅರುಣ್ ಜೇಟ್ಲಿ ಆರೋಪಿಸಿದ್ದಾರೆ.
ಇದೇ ವೇಳೆ ತುರ್ತು ಪರಿಸ್ಥಿತಿಯ ವಿರುದ್ಧದ ತಮ್ಮ ಮೊದಲ ಸತ್ಯಾಗ್ರಹವನ್ನು ನೆನಪಿಸಿಕೊಂಡ ಜೇಟ್ಲಿ, 1975ರ ಜೂನ್ 26ರಂದು ದೆಹಲಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಪ್ರತಿಭಟನೆಯ ನೇತೃತ್ವವಹಿಸಿದ್ದಕ್ಕೆ ನನ್ನನ್ನು ತಿಹಾರ್ ಜೈಲಿಗೆ ಅಟ್ಟಿದ್ದರು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


