ಬೆಂಗಳೂರಿನಿಂದ ದೆಹಲಿಗೆ ವಾಪಸ್ಸಾಗಿ ಕೆಲಸ ಮಾಡಿ: ದೆಹೆಲಿ ಸಿಎಂ ಕೇಜ್ರಿವಾಲ್ ಗೆ ಬಿಜೆಪಿ ನಾಯಕನ ಪತ್ರ
ಬೆಂಗಳೂರಿನಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಪತ್ರ ಬರೆದಿದ್ದು ಬೆಂಗಳೂರಿನಿಂದ ದೆಹಲಿಗೆ ವಾಪಸ್ಸಾಗಿ ಕೆಲಸದಲ್ಲಿ ತೊಡಗುವಂತೆ

Published On :
ನವದೆಹಲಿ: ಬೆಂಗಳೂರಿನಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಪತ್ರ ಬರೆದಿದ್ದು ಬೆಂಗಳೂರಿನಿಂದ ದೆಹಲಿಗೆ ವಾಪಸ್ಸಾಗಿ ಕೆಲಸದಲ್ಲಿ ತೊಡಗುವಂತೆ ಒತ್ತಾಯಿಸಿದ್ದಾರೆ.
ಮುಂಗಾರು ಪ್ರಾರಂಭವಾಗಲಿದ್ದು ಪರಿಸ್ಥಿತಿಯನ್ನು ಎದುರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕಿದೆ ಆದ್ದರಿಂದ ದೆಹಲಿ ಮುಖ್ಯಮಂತ್ರಿಗಳು ಬೆಂಗಳೂರಿನಿಂದ ದೆಹಲಿಗೆ ವಾಪಸ್ಸಾಗಿ ಕೆಲಸದಲ್ಲಿ ತೊಡಗಬೇಕೆಂದು ಹೇಳಿದ್ದಾರೆ. ವೈದ್ಯರು ಕೇಜ್ರಿವಾಲ್ ಆರೋಗ್ಯವಾಗಿದ್ದಾರೆ ಎಂದು ಹೇಳಿರುವ ಬಗ್ಗೆ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿರುವ ಮನೋಜ್ ತಿವಾರಿ, "ನೀವು ಆರೋಗ್ಯವಾಗಿದ್ದೀರಿ ಎಂದು ವೈದ್ಯರು ದೃಢೀಕರಿಸಿದ್ದಾರೆ. ಆದ್ದರಿಂದ ಸಾಧ್ಯವಾದಷ್ಟೂ ಶೀಘ್ರವೇ ದೆಹಲಿಗೆ ಆಗಮಿಸಿ ಕೆಲಸದಲ್ಲಿ ತೊಡಗಬೇಕೆಂದು ಆಗ್ರಹಿಸಿದ್ದಾರೆ.
ಮುಂಗಾರು ಪ್ರಾರಂಭವಾಗಲಿದ್ದು ಚರಂಡಿಗಳ ಸಮಸ್ಯೆಗಳನ್ನು ಬಗೆಹರಿಸಬೇಕಿದೆ, ಅಷ್ಟೇ ಅಲ್ಲದೇ ವಾಯುಮಾಲಿನ್ಯ, ವಿದ್ಯುತ್ ಕಡಿತ ಸೇರಿದಂತೆ ದೆಹಲಿಯ ಜನತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ, ಅವುಗಳನ್ನು ಶೀಘ್ರವೇ ಬಗೆಹರಿಸಬೇಕೆಂದು ಮನೋಜ್ ತಿವಾರಿ ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


