ದೇಶ

ತಮಿಳುನಾಡು ರಾಜ್ಯಪಾಲರ ಜೈಲು ಶಿಕ್ಷೆ ಎಚ್ಚರಿಕೆ ಖಂಡಿಸಿದ ಡಿಎಂಕೆ

ತಮ್ಮ ವಿರುದ್ಧ ಪ್ರತಿಭಟನೆ ಮಾಡುವವರನ್ನು ಜೈಲಿಗೆ ಕಳುಹಿಸುವ ತಮಿಳುನಾಡು ರಾಜಭವನದ ಎಚ್ಚರಿಕೆಯನ್ನು...

ತಮಿಳುನಾಡು ರಾಜ್ಯಪಾಲರ ಜೈಲು ಶಿಕ್ಷೆ ಎಚ್ಚರಿಕೆ ಖಂಡಿಸಿದ ಡಿಎಂಕೆ
ಎಂಕೆ ಸ್ಟಾಲಿನ್
Published On :
ಚೆನ್ನೈ: ತಮ್ಮ ವಿರುದ್ಧ ಪ್ರತಿಭಟನೆ ಮಾಡುವವರನ್ನು ಜೈಲಿಗೆ ಕಳುಹಿಸುವ ತಮಿಳುನಾಡು ರಾಜಭವನದ ಎಚ್ಚರಿಕೆಯನ್ನು ಪ್ರತಿಪಕ್ಷ ಡಿಎಂಕೆ ಖಂಡಿಸಿದ್ದು, ತಮಿಳುನಾಡಿನ ಸ್ವಾಯತ್ತತೆಯನ್ನು ರಕ್ಷಿಸಲು ತನ್ನ ಹೋರಾಟ ಮುಂದುವರೆಯಲಿದೆ ಎಂದು ಹೇಳಿದೆ.
ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವರು ನೇರವಾಗಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಡಿಎಂಕೆ ಕಾರ್ಯಾಧ್ಯಕ್ಷ ಎಂಕೆ ಸ್ಟಾಲಿನ್ ಅವರು, ತಮ್ಮ ಪಕ್ಷ ಕೇಸ್ ದಾಖಲಿಸುವ ಬೆದರಿಕೆಗೆ ಹೆದರುವುದಿಲ್ಲ ಎಂದಿದ್ದಾರೆ.
ರಾಜ್ಯಪಾಲರು ಜಿಲ್ಲಾ ಭೇಟಿಯ ವೇಳೆ ಅಧಿಕಾರಿಗಳೊಂದಿಗೆ ಚರ್ಚಿಸುವ ಅಧಿಕಾರ ಮತ್ತು ಸ್ವಾತಂತ್ರ್ಯವನ್ನು ಹೊಂದಿದ್ದಾರೆ. ಇದಕ್ಕೆ ಅಡ್ಡಿಪಡಿಸುವವರಿಗೆ ಕಾನೂನುಬದ್ಧವಾಗಿ ಏಳು ವರ್ಷ ಜೈಲು ಶಿಕ್ಷೆ ವಿಧಿಸಬಹುದಾಗಿ ಎಂದು ನಿನ್ನೆ ರಾಜಭವನ ಪ್ರಕಟಣೆ ನೀಡುವ ಮೂಲಕ ಡಿಎಂಕೆಗೆ ಎಚ್ಚರಿಕೆ ನೀಡಿತ್ತು.
ರಾಜಭವನ ಮತ್ತು ರಾಜ್ಯಪಾಲರ ಪ್ರಕಟಣೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇನೆ. ಇಂತಹ ಬೆದರಿಕೆಗಳಿಗೆ ನಮ್ಮ ಪಕ್ಷ ಬಗ್ಗುವುದಿಲ್ಲ. ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಸ್ಟಾಲಿನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಳೆದ ಶುಕ್ರವಾರ ರಾಜ್ಯಪಾಲರು ತ್ರಿಚಿ ಜಿಲ್ಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದ ಡಿಎಂಕೆ ಕಾರ್ಯಕರ್ತರನ್ನು ಬಂಧಿಸಲಾಗಿತ್ತು. 192 ಡಿಎಂಕೆ ಕಾರ್ಯಕರ್ತರ ಬಂಧನ ಖಂಡಿಸಿ ರಾಜಭವನದ ಮುಂದೆ ಪ್ರತಿಭಟನೆ ನಡೆಸಿದ  ಡಿಎಂಕೆ ಕಾರ್ಯಾಧ್ಯಕ್ಷ ಎಂ. ಕೆ. ಸ್ಟಾಲಿನ್ ಹಾಗೂ ಪಕ್ಷದ ಇತರ ಕಾರ್ಯಕರ್ತರ ವಿರುದ್ಧ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.