ಜುಲೈ 18 ರಿಂದ ಆಗಸ್ಟ್ 10 ರವರೆಗೆ ಸಂಸತ್ತಿನ ಮುಂಗಾರು ಅಧಿವೇಶನ
ಜುಲೈ.18 ರಿಂದ ಆಗಸ್ಟ್ 10 ರವರೆಗೆ ಸಂಸತ್ ಮುಂಗಾರು ಅಧಿವೇಶನ ನಡೆಯಲಿದೆ ಎಂದು ಸೋಮವಾರ ತಿಳಿದುಬಂದಿದೆ...

Published On :
ನವದೆಹಲಿ: ಜುಲೈ.18 ರಿಂದ ಆಗಸ್ಟ್ 10 ರವರೆಗೆ ಸಂಸತ್ ಮುಂಗಾರು ಅಧಿವೇಶನ ನಡೆಯಲಿದೆ ಎಂದು ಸೋಮವಾರ ತಿಳಿದುಬಂದಿದೆ.
ಸಂಸದೀಯ ವ್ಯವಹಾರಗಳ ಸಚಿವ ಸಂಪುಟ ಸಮಿತಿ (ಸಿಸಿಪಿಎ) ಮುಂದಿರುವ ಪ್ರಸ್ತಾವನೆ ಪ್ರಕಾರ ಸಂಸತ್ ಮುಂಗಾರು ಅಧಿವೇಶನ ಜುಲೈ.18 ರಿಂದ ಆರಂಭವಾಗುವ ಸಾಧ್ಯತೆಗಳಿದ್ದು, ಆಗಸ್ಟ್ 10ರಂದು ಅಧಿವೇಶನ ಮುಕ್ತಾಯವಾಗಲಿದೆ ಎಂದು ವರದಿಗಳು ತಿಳಿಸಿವೆ.
ಮುಂಗಾರು ಅಧಿವೇಶನ ಕುರಿತಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ರಾಜಧಾನಿ ನವದೆಹಲಿಯಲ್ಲಿ ಸಭೆ ನಡೆಸಿದ್ದು, ಸಭೆಯಲ್ಲಿ ಅಧಿವೇಶನಕ್ಕೆ ದಿನಾಂಕವನ್ನು ನಿಗದಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಭಾಷಣದೊಂದಿಗೆ ಅಧಿವೇಶನ ಆರಂಭಗೊಳ್ಳಲಿದ್ದು, 18 ದಿನಗಳ ಕಾಲ ಅಧಿವೇಶನವನ್ನು ನಡೆಸಲಾಗುತ್ತದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


