ಮೋದಿ ಸರ್ಕಾರ ಸರ್ಜಿಕಲ್ ದಾಳಿಯನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ: ಕಾಂಗ್ರೆಸ್ ಆರೋಪ
2016 ರಲ್ಲಿ ನಡೆದ ಸರ್ಜಿಕಲ್ ದಾಳಿಯನ್ನು ಕೇಂದ್ರ ಸರ್ಕಾರ ಮತ್ತು ಬಿಜೆಪಿ ರಾಜಕೀಯಕರಣಗೊಳಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ...

Published On :
ನವದೆಹಲಿ: 2016 ರಲ್ಲಿ ನಡೆದ ಸರ್ಜಿಕಲ್ ದಾಳಿಯನ್ನು ಕೇಂದ್ರ ಸರ್ಕಾರ ಮತ್ತು ಬಿಜೆಪಿ ರಾಜಕೀಯಕರಣಗೊಳಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ದೇಶಕ್ಕಾಗಿ ಸೈನಿಕರು ತಮ್ಮ ರಕ್ತ ಹಾಗೂ ಪ್ರಾಣ ಬಲಿದಾನ ಮಾಡಿದ್ದಾರೆ, ಇದನ್ನು ಬಿಜೆಪಿ ರಾಜಕೀಯಗೊಳಿಸಬಾರದು ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಜಿಕಲ್ ದಾಳಿಯಲ್ಲಿ ಯೋಧರು ದೇಶಕ್ಕಾಗಿ ತಮ್ಮ ಬಲಿದಾನ ಮಾಡಿದ್ದಾರೆ, ಇದನ್ನು ಮತಗಳಿಕೆಗೆ ಬಳಸಬಾರದು, ಪ್ರಧಾನಿ ಮೋದಿ ವೈಭವೀಕರಿಸುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ಯಾವಾಗ ಮೋದಿ ಸರ್ಕಾರ ವಿಫಲವಾಗುವುದೋ, ಅಮಿತ್ ಶಾ ಸೋಲು ಪ್ರಾರಂಭವಾಗುವುದೋ ಹಾಗೆಲ್ಲಾ ಬಿಜೆಪಿ ಸೇನೆಯ ಶೌರ್ಯವನ್ನು ದುರ್ಬಳಕೆ ಮಾಡಿಕೊಳ್ಳುತ್ತದೆ ಎಂಬುದನ್ನು ಜನ ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ,. ಅಟಲ್ ಬಿಹಾರ ವಾಜಪೇಯಿ ಮತ್ತು ಮನಮೋಹನ್ ಸಿಂಗ್ ಅವರ ಆಡಳಿತಾವಧಿಯಲ್ಲೂ ಸರ್ಜಿಕಲ್ ದಾಳಿ ನಡೆದಿತ್ತು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್Modi governmentಮೋದಿ ಸರ್ಕಾರRandeep SurjewalaSurgical strikesಸರ್ಜಿಕಲ್ ಸ್ಟ್ರೈಕ್ರಂದೀಪ್ ಸುರ್ಜೇವಾಲಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


