ದೇಶ

ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಕಾಂಗ್ರೆಸ್ ತನ್ನ ಒಪ್ಪಿಗೆ ಸ್ಪಷ್ಟಪಡಿಸಲಿ: ರವಿಶಂಕರ್ ಪ್ರಸಾದ್

ಸರ್ಜಿಕಲ್ ಸ್ಟ್ರೈಕ್ ಗೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿಜೆಪಿ, ಕಾಂಗ್ರೆಸ್ ಸಶಸ್ತ್ರ ಪಡೆಗಳ...

ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಕಾಂಗ್ರೆಸ್ ತನ್ನ ಒಪ್ಪಿಗೆ ಸ್ಪಷ್ಟಪಡಿಸಲಿ: ರವಿಶಂಕರ್ ಪ್ರಸಾದ್
ರವಿಶಂಕರ್ ಪ್ರಸಾದ್
Published On :
ನವದೆಹಲಿ: ಸರ್ಜಿಕಲ್ ಸ್ಟ್ರೈಕ್ ಗೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿಜೆಪಿ, ಕಾಂಗ್ರೆಸ್ ಸಶಸ್ತ್ರ ಪಡೆಗಳ ಬದ್ಧತೆ ಮತ್ತು ಧೈರ್ಯವನ್ನು ಪ್ರಶ್ನಿಸುತ್ತಿದೆ. ಈ ಮೂಲಕ ಸೇನೆಯ ನೈತಿಕ ಸ್ಥೈರ್ಯ ಕುಗ್ಗಿಸುತ್ತಿದೆ ಎಂದು ಆರೋಪಿಸಿದೆ.
ಕೇಂದ್ರ ಸರ್ಕಾರ ಸರ್ಜಿಕಲ್ ಸ್ಟ್ರೈಕ್ ಅನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿದೆ ಎಂಬ ಕಾಂಗ್ರೆಸ್ ಹೇಳಿಕೆಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು, ಬಿಜೆಪಿ ಕಾರ್ಯಾಚರಣೆಯ ವಿಡಿಯೋ ಬಿಡುಗಡೆ ಮಾಡುವ ಮೂಲಕ ರಾಜಕೀಯ ಲಾಭ ಪಡೆಯುವುದಾದರೆ ಉತ್ತರ ಪ್ರದೇಶ, ಗುಜರಾತ್ ಅಥವಾ ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆಯೇ ಬಿಡುಗಡೆ ಮಾಡುತ್ತಿದ್ದೇವು ಎಂದರು.
ಸೇನಾ ಅಧಿಕಾರಿಗಳು 2016ರಲ್ಲಿ ನಡೆದ ಸರ್ಜಿಕಲ್ ಸ್ಟ್ರೈಕ್ ವಿಡಿಯೋವನ್ನು ದೃಢೀಕರಿಸಿದ್ದಾರೆ. ವಿಡಿಯೋ ಈಗ ಏಕೆ ಬಿಡುಗಡೆ ಮಾಡಿದ್ದಾರೆ. ಅದು ಎಲ್ಲಿಂದ ಬಂತು ಎಂಬ ಪ್ರಶ್ನೆ ಈಗ ಅಪ್ರಸ್ತೂತ. ಆದರೆ ಕಾಂಗ್ರೆಸ್ ಆ ವಿಡಿಯೋ ಅಸಲಿ ಎಂದು ಒಪ್ಪಿಕೊಳ್ಳುತ್ತದೆಯೋ ಅಥವಾ ಇಲ್ಲ ಎಂಬುದುನ್ನು ತಿಳಿಸಲಿ ಮತ್ತು ಸರ್ಜಿಕಲ್ ಸ್ಟ್ರೈಕ್ ಗೆ ನಿಮ್ಮ ಒಪ್ಪಿಗೆ ಇದೆಯೇ ಅಥವಾ ಇಲ್ಲವೋ ಎಂಬುದನ್ನು ಸ್ಪಷ್ಟಪಡಿಸಲಿ ಎಂದು ಕೇಂದ್ರ ಸಚಿವರು ಆಗ್ರಹಿಸಿದ್ದಾರೆ.
ಪ್ರತಿಪಕ್ಷದ ಈ ಹೇಳಿಕೆಯಿಂದಾಗಿ ಉಗ್ರರು ಮತ್ತು ಪಾಕಿಸ್ತಾನದಲ್ಲಿರುವ ಅವರ ಪೋಷಕರಿಗೆ ತುಂಬಾ ಸಂತೋಷವಾಗಿದೆ ಎಂದು ರವಿಶಂಕರ್ ಪ್ರಸಾದ್ ವ್ಯಂಗ್ಯವಾಡಿದ್ದಾರೆ.
ಇದಕ್ಕು ಮುನ್ನ ಬಿಜೆಪಿ ದೇಶದ ರಕ್ಷಣೆಗಾಗಿ ಪ್ರಾಣಾರ್ಪಣೆ ಮಾಡಿದ ಸೈನಿಕರ ಬಲಿದಾನವನ್ನು ತನ್ನ ರಾಜಕೀಯ ಲಾಭಕ್ಕಾಗಿ ಬಳಸಿಕೊಳುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ ಆರೋಪಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.