ಹೆಚ್ ಡಿಕೆ ಪ್ರಮಾಣವಚನದಲ್ಲಿದ್ದ ನಾಯಕರು 2019ರಲ್ಲಿ ಒಟ್ಟಿಗೆ ಇರುತ್ತಾರೆ ಎಂಬ ಖಾತ್ರಿ ಇಲ್ಲ: ದೇವೇಗೌಡ
ಹೆಚ್ ಡಿ ಕುಮಾರಸ್ವಾಮಿ ಪದಗ್ರಹಣದ ವೇಳೆ ವಿಧಾನಸೌಧದದಲ್ಲಿ ಬಿಜೆಪಿಯೇತರ ಪಕ್ಷಗಳ ನಾಯಕರ ಒಗ್ಗಟ್ಟು ಪ್ರದರ್ಶನ 2019 ರ ಲೋಕಸಭಾ ಚುನಾವಣೆ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿತ್ತು.

Published On :
ನವದೆಹಲಿ: ಹೆಚ್ ಡಿ ಕುಮಾರಸ್ವಾಮಿ ಪದಗ್ರಹಣದ ವೇಳೆ ವಿಧಾನಸೌಧದದಲ್ಲಿ ಬಿಜೆಪಿಯೇತರ ಪಕ್ಷಗಳ ನಾಯಕರ ಒಗ್ಗಟ್ಟು ಪ್ರದರ್ಶನ 2019 ರ ಲೋಕಸಭಾ ಚುನಾವಣೆ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿತ್ತು. ಆದರೆ ಆ ಒಗ್ಗಟ್ಟು ಮುಂದುವರೆಯುವ ಬಗ್ಗೆ ಈಗ ಸ್ವತಃ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರಿಗೇ ಅನುಮಾನವಿದ್ದಂತಿದೆ.
6 ಬಿಜೆಪಿಯೇತರ ಪಕ್ಷಗಳ ನಾಯಕರು ಹೆಚ್ ಡಿಕೆ ಪ್ರಮಾಣವಚನ ಕಾರ್ಯಕ್ರಮದ ವೇಳೆ ಒಗ್ಗಟ್ಟು ಪ್ರದರ್ಶನ ಮಾಡಿದ್ದರೆಂಬ ಮಾತ್ರಕ್ಕೆ 2019 ರ ಚುನಾವಣೆಯಲ್ಲಿ ಒಟ್ಟಿಗೆ ಸ್ಪರ್ಧಿಸುತ್ತಾರೆ ಎಂದು ಹೇಳುವುದಕ್ಕೆ ಸಾಧ್ಯವಿಲ್ಲ ಎಂದು ದೆಹಲಿಯಲ್ಲಿ ದೇವೇಗೌಡ ತಿಳಿಸಿದ್ದಾರೆ.
ಬಿಜೆಪಿಯನ್ನು ಎದುರಿಸುವುದಕ್ಕೆ ತೃತೀಯ ರಂಗದ ಅಗತ್ಯವಿದೆ ಎಂದು ಹೇಳಿರುವ ದೇವೇಗೌಡರು, ಪ್ರಧಾನಿ ನರೇಂದ್ರ ಮೋದಿಯಿಂದ ಕಾರ್ಯಕರ್ತರಿಗೆ ಲೋಕಸಭಾ ಚುನಾವಣೆ ಅವಧಿಗೂ ಮುನ್ನವೇ ಸಿದ್ಧರಾಗಿರಿ ಎಂಬ ಸಂದೇಶ ರವಾನೆಯಾಗಿದೆ ಎಂದು ದೇವೇಗೌಡ ಅಭಿಪ್ರಾಯಪಟ್ಟಿದ್ದಾರೆ.
ಬಿಎಸ್ ಪಿ ಹಾಗೂ ಸಮಾಜವಾದಿ ಪಕ್ಷ ಉತ್ತರ ಪ್ರದೇಶದಲ್ಲಿ ತಲಾ 40 ಸ್ಥಾನಗಳನ್ನು ಹಂಚಿಕೊಳ್ಳುವುದಕ್ಕೆ ಚರ್ಚೆ ನಡೆಸುತ್ತಿದ್ದಾರೆ. ಕರ್ನಾಟಕದಲ್ಲಿ ನಾವು ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೂ ಸಹ ಕಾಂಗ್ರೆಸ್ ಜೊತೆ ಚುನಾವಣೆ ಎದುರಿಸುತ್ತೇವೆ ಎಂದು ದೇವೇಗೌಡ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


