ದೇಶ

ಸ್ವಿಸ್ ಬ್ಯಾಂಕ್ ಗಳಲ್ಲಿರುವ ಭಾರತೀಯರ ಹಣದ ವಿರುದ್ಧ ಕ್ರಮ: ಕೇಂದ್ರ

2017ರಲ್ಲಿ ಸ್ವಿಸ್ ಬ್ಯಾಂಕ್ ನಲ್ಲಿರುವ ಭಾರತೀಯರ ಹಣ ಶೇ.50ರಷ್ಟು(7 ಸಾವಿರ ಕೋಟಿ) ಹೆಚ್ಚಳವಾಗಿರುವ ಬಗ್ಗೆ ಅಚ್ಚರಿ...

ಸ್ವಿಸ್ ಬ್ಯಾಂಕ್ ಗಳಲ್ಲಿರುವ ಭಾರತೀಯರ ಹಣದ ವಿರುದ್ಧ ಕ್ರಮ: ಕೇಂದ್ರ
ಪಿಯೂಸ್ ಗೋಯಲ್
Published On :
ನವದೆಹಲಿ: 2017ರಲ್ಲಿ ಸ್ವಿಸ್ ಬ್ಯಾಂಕ್ ನಲ್ಲಿರುವ ಭಾರತೀಯರ ಹಣ ಶೇ.50ರಷ್ಟು(7 ಸಾವಿರ ಕೋಟಿ) ಹೆಚ್ಚಳವಾಗಿರುವ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ ಕೇಂದ್ರ ಹಣಕಾಸು ಸಚಿವ ಪಿಯೂಸ್ ಗೋಯಲ್ ಅವರು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಶುಕ್ರವಾರ ಹೇಳಿದ್ದಾರೆ.
ದ್ವಿಪಕ್ಷೀಯ ಒಪ್ಪಂದದ ಪ್ರಕಾರ ಭಾರತ, ಸ್ವಿಡ್ಜರ್ ಲ್ಯಾಂಡ್ ಬ್ಯಾಂಕ್ ಗಳಲ್ಲಿ ಭಾರತೀಯರು ಹೊಂದಿರುವ ಖಾತೆಗಳ ವಿವರ ಪಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ದ್ವಿಪಕ್ಷೀಯ ಒಪ್ಪಂದದ ಪ್ರಕಾರ, ಸ್ವಿಡ್ಜರ್ ಲ್ಯಾಂಡ್ ಸರ್ಕಾರ ಜನವರಿ 1, 2018ರಿಂದ ಡಿಸೆಂಬರ್ 31, 2018ರ ವರೆಗೆ ಭಾರತೀಯರ ಬ್ಯಾಂಕ್ ಖಾತೆಗಳಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು 2019ರಲ್ಲಿ ನೀಡಲಿದೆ ಎಂದು ಗೋಯಲ್ ಅವರು ವರದಿಗಾರರಿಗೆ ತಿಳಿಸಿದ್ದಾರೆ.
ಇದೇ ವೇಳೆ ಸ್ವಿಸ್ ಬ್ಯಾಂಕ್ ಗಳಲ್ಲಿ ಭಾರತೀಯರ ಠೇವಣಿ ಶೇ.50ರಷ್ಟು ಹೆಚ್ಚಳವಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಅದರ ಮಾಹಿತಿ ನಮಗೆ ಬರಬೇಕಿದೆ. ಬಂದ ನಂತರ ಅದು ಕಪ್ಪು ಹಣವೇ ಅಥವಾ ಅಕ್ರಮ ವರ್ಗಾವಣೆಯೇ ಎಂಬುದನ್ನು ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.
ವಿದೇಶದಲ್ಲಿರುವ ಕಪ್ಪು ಹಣದ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಕೇಂದ್ರ ಸರ್ಕಾರ ಘೋಷಿಸಿದ ನಂತರ ಸ್ವಿಸ್ ಬ್ಯಾಂಕ್ ಗಳಲ್ಲಿನ ಭಾರತೀಯರ ಠೇವಣಿ ಸತತ ಮೂರು ವರ್ಷಗಳಿಂದ ಇಳಿಕೆಯಾಗಿತ್ತು. ಆದರೆ ಕಳೆದ ವರ್ಷ ದಿಢೀರ್ ಶೇ.50ರಷ್ಟು ಹೆಚ್ಚಾಗಿದೆ.
ನಿನ್ನೆ ಸ್ವಿಸ್ ನ್ಯಾಷನಲ್ ಬ್ಯಾಂಕ್ (ಎಸ್ ಎನ್ ಬಿ) ಬಿಡುಗಡೆ ಮಾಡಿರುವ ವಾರ್ಷಿಕ ವರದಿಯ ಪ್ರಕಾರ, 2017ರಲ್ಲಿ ಸ್ವಿಸ್ ಬ್ಯಾಂಕ್ ನಲ್ಲಿ ವಿಶ್ವದ ಒಟ್ಟು ವಿದೇಶಿ ಗ್ರಾಹಕರ ಹಣದಲ್ಲಿ ಶೇ.3ರಷ್ಟು(100 ಲಕ್ಷ ಕೋಟಿ ರುಪಾಯಿ) ಹೆಚ್ಚಳವಾಗಿದೆ. ಈ ಪೈಕಿ ಭಾರತೀಯರ ಹಣ ಶೇ.50ರಷ್ಟು(7 ಸಾವಿರ ಕೋಟಿ) ಹೆಚ್ಚವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.