ಅಮರನಾಥ ಯಾತ್ರೆ; ಉಧಂಪುರ ರೈಲ್ವೇ ನಿಲ್ದಾಣದಲ್ಲಿ ಹೆಚ್ಚಿದ ಭದ್ರತೆ
ಅಮರನಾಥ ಯಾತ್ರೆ ಆರಂಭಗೊಂಡಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರಿಕೆ ವಹಿಸಿರುವ ಅಧಿಕಾರಿಗಳು ಉಧಂಪುರ ರೈಲ್ವೇ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ...

Published On :
ಉಧಂಪುರ; ಅಮರನಾಥ ಯಾತ್ರೆ ಆರಂಭಗೊಂಡಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರಿಕೆ ವಹಿಸಿರುವ ಅಧಿಕಾರಿಗಳು ಉಧಂಪುರ ರೈಲ್ವೇ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ.
ಭದ್ರತಾ ಕ್ರಮಗಳ ಕುರಿತೆತ ಪ್ರತಿಕ್ರಿಯೆ ನೀಡಿರುವ ಅಧಿಕಾರಿ ರಂಜಿತ್ ಸಿಂಗ್ ಸಂಬ್ಯಾಲ್ ಅವರು, ಅಮರನಾಥ ಯಾತ್ರೆ ಯಾತ್ರಿಕರು ರೈಲ್ವೇ ಮಾರ್ಗದಿಂದ ಪ್ರಯಾಣ ಬೆಳೆಸುತ್ತಿದ್ದು, ಈ ಹಿನ್ನಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಹೇಳಿದ್ದಾರೆ.
ಅಮರನಾಥ ಯಾತ್ರಿಕರು ರೈಲ್ವೇ ಮಾರ್ಗವನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಪ್ರಮುಖವಾಗಿ ಉಧಂಪುರ ರೈಲ್ವೇ ನಿಲ್ದಾಣದ ಮೂಲಕ ಪ್ರಯಾಣ ಬೆಳೆಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ರೈಲ್ವೇ ನಿಲ್ದಾಣದ ಮುಖ್ಯ ದ್ವಾರದಲ್ಲಿ ಹಲವು ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಎಕ್ಸ್-ರೇ ಮಷಿನ್, ಬ್ಯಾಗ್ ಸ್ಕ್ಯಾನರ್, ಭದ್ರತಾ ನಾಯಿಗಳಿಂದ ಪರಿಶೀಲನೆಗಳನ್ನು ನಡೆಸಲಾಗುತ್ತಿದೆ. ರೈಲ್ವೇ ರಕ್ಷಣಾ ಪಡೆಗಳು ಕೂಡ ನಮ್ಮೊಂದಿಗೆ ಕೈಜೋಡಿಸಿವೆ ಎಂದು ತಿಳಿಸಿದ್ದಾರೆ.
ಯಾತ್ರಿಕರ ಸಹಾಯಕ್ಕಾಗಿ ಪೊಲೀಸರು 24*7 ಸಹಾಯವಾಣಿಯನ್ನು ಆರಂಭಿಸಿವೆ. ಯಾತ್ರಿಕರು ಎಲ್ಲಿಯೇ ಇದ್ದರೂ, ಯಾವುದೇ ಸಮಯದಲ್ಲಿಯೇ ಆದರೂ ಅವರಿಗೆ ಸಹಾಯ ಮಾಡಲು ಸಿಬ್ಬಂದಿಗಳು ಸಿದ್ಧರಿದ್ದಾರೆಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಜಮ್ಮು ಮತ್ತು ಕಾಶ್ಮೀರJammu and Kashmirsecurityಭದ್ರತೆಅಮರನಾಥ ಯಾತ್ರೆAmarnath YatraUdhampur Railway Stationಉಧಂಪುರ ರೈಲ್ವೇ ನಿಲ್ದಾಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


