ದೇಶ

ಜಮ್ಮು-ಕಾಶ್ಮೀರ: ಕುಪ್ವಾರದಲ್ಲಿ ಎನ್'ಕೌಂಟರ್; ಓರ್ವ ಉಗ್ರನನ್ನು ಸದೆಬಡಿದ ಸೇನೆ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ...

ಜಮ್ಮು-ಕಾಶ್ಮೀರ: ಕುಪ್ವಾರದಲ್ಲಿ ಎನ್'ಕೌಂಟರ್; ಓರ್ವ ಉಗ್ರನನ್ನು ಸದೆಬಡಿದ ಸೇನೆ
ಸಂಗ್ರಹ ಚಿತ್ರ
Published On :
ಕುಪ್ವಾರ; ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ. 
ಕುಪ್ವಾರ ಜಿಲ್ಲೆಯ ತ್ರೆಹ್ಗಾಮ್ ಎಂಬ ಪ್ರದೇಶದಲ್ಲಿ ಭದ್ರತಾ ಪಡೆಗಳು ಎನ್'ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ. ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ. 
ಈ ನಡುವೆ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಗ್ರೆನೇಡ್ ದಾಳಿ ನಡೆಸಿದ ಬಳಿಕ ಉಗ್ರರು ಸ್ಥಳದಿಂದ ಕಾಲ್ಕಿತ್ತಿದ್ದು, ಉಗ್ರರಿಗಾಗಿ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.