ಗೋವಾ: ಟ್ಯಾಕ್ಸಿ ಚಾಲಕನಿಂದ ಮಹಿಳೆ ಮೇಲೆ ಅತ್ಯಾಚಾರ, ಆರೋಪಿ ಬಂಧನ
ವಾಸ್ಕೋ ವಿಮಾನ ನಿಲ್ದಾಣ ಸಮೀಪ 20 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಟ್ಯಾಕ್ಸಿ ಚಾಲಕನನ್ನು...

Published On :
ಪಣಜಿ: ವಾಸ್ಕೋ ವಿಮಾನ ನಿಲ್ದಾಣ ಸಮೀಪ 20 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಟ್ಯಾಕ್ಸಿ ಚಾಲಕನನ್ನು ಬಂಧಿಸಲಾಗಿದೆ ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ.
ನಿನ್ನೆ ಸಂಜೆ ಈ ಘಟನೆ ನಡೆದಿದ್ದು, ಆರೋಪಿ ಚಾಲಕನನ್ನು ರವಿಚಂದ್ರ ಭಟ್(48) ಎಂದು ಗುರುತಿಸಲಾಗಿದೆ.
ಆರೋಪಿ ರವಿಚಂದ್ರ ಭಟ್, ವಿಮಾನ ನಿಲ್ದಾಣ ರಸ್ತೆಯಲ್ಲಿ ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಲಿಫ್ಟ್ ಕೊಡುವುದಾಗಿ ಹೇಳಿ ಬಲವಂತವಾಗಿ ಕಾರಿಗೆ ಹತ್ತಿಸಿಕೊಂಡು, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆಕೆ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ವಾಸ್ಕೋ ಪೊಲೀಸ್ ಇನ್ಸ್ ಪೆಕ್ಟರ್ ನೋಲಸ್ಕೋ ರಪೊಸೊ ಅವರು ಹೇಳಿದ್ದಾರೆ.
ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಇಂದು ಬೆಳಗ್ಗೆ ಆರೋಪಿ ಟ್ಯಾಕ್ಸಿ ಚಾಲಕನನ್ನು ಬಂಧಿಸಲಾಗಿದೆ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


