ಭಿನ್ನಾಭಿಪ್ರಾಯ ಬಗೆಹರಿಸಿಕೊಳ್ಳಲು ಬಿಜೆಪಿ ನಾಯಕರನ್ನು ಭೇಟಿ ಮಾಡಲಿರುವ ನಿತೀಶ್ ಕುಮಾರ್
ಲೋಕಸಭಾ ಚುನಾವಣೆಯಲ್ಲಿ ಬಿಹಾರದಲ್ಲಿ ಎನ್ ಡಿಎ ಮೈತ್ರಿಕೂಟದ ಸ್ಥಾನಗಳ ಹಂಚಿಕೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ.

Published On :
ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಹಾರದಲ್ಲಿ ಎನ್ ಡಿಎ ಮೈತ್ರಿಕೂಟದ ಸ್ಥಾನಗಳ ಹಂಚಿಕೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ.
ಜುಲೈನಲ್ಲಿ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಿತೀಶ್ ಕುಮಾರ್ ಮಾತುಕತೆ ನಡೆಸಲಿದ್ದಾರೆ. ಆದರೆ ಲೋಕಸಭಾ ಚುನಾವಣೆಯಲ್ಲಿ ಸ್ಥಾನಗಳ ಹಂಚಿಕೆಗೆ ಸಂಬಂಧಿಸಿದಂತೆ ಈಗಲೇ ತೀರ್ಮಾನ ಮಾಡುವುದು ಸರಿಯಲ್ಲ ಎಂಬುದು ಬಿಜೆಪಿ ನಾಯಕರ ಅಭಿಪ್ರಾಯ ಎಂದು ಹೇಳಲಾಗುತ್ತಿದೆ.
ಜೆಡಿಯು ರಾಷ್ಟ್ರೀಯ ಕಾರ್ಯಕಾರಿಣಿಗೂ ಮುನ್ನ ಜು.6 ರಂದು ನಿತೀಶ್ ಕುಮಾರ್ ನವದೆಹಲಿಗೆ ತೆರಳುವ ಸಾಧ್ಯತೆ ಇದ್ದು, ಪ್ರಧಾನಿಯನ್ನೂ ಭೇಟಿ ಮಾಡಿ 2019 ರ ಲೋಕಸಭಾ ಚುನಾವಣೆಯ ಬಗ್ಗೆ ಚರ್ಚಿಸಲಿದ್ದಾರೆ. ಇದೇ ವೇಳೆ ಜುಲೈ ತಿಂಗಳಲ್ಲೇ ಅಮಿತ್ ಶಾ ಸಹ ಪಾಟ್ನಾಗೆ ಭೇಟಿ ನೀಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


