ದೇಶ

ವಿಧಾನಸೌಧದ ಗೇಟ್ ಬಳಿ ಆತ್ಮಹತ್ಯೆಗೆ ಯತ್ನಿಸಿದ ಉದ್ಯಮಿ

ತನ್ನ ಕೆಲಸವಾಗುವುದಕ್ಕೆ ಶಾಸಕರೊಬ್ಬರಿಗೆ 1 ಕೋಟಿ ರೂಪಾಯಿ ಹಣ ನೀಡಿದ್ದ ಉದ್ಯಮಿ ಜೂ.30 ರಂದು ವಿಧಾನಸೌಧದ ಗೇಟ್ ಮುಂಭಾಗದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ವಿಧಾನಸೌಧದ ಗೇಟ್ ಬಳಿ ಆತ್ಮಹತ್ಯೆಗೆ ಯತ್ನಿಸಿದ ಉದ್ಯಮಿ
ವಿಧಾನಸೌಧದ ಗೇಟ್ ಬಳಿ ಆತ್ಮಹತ್ಯೆಗೆ ಯತ್ನಿಸಿದ ಉದ್ಯಮಿ
Published On :
ಬೆಂಗಳೂರು: ತನ್ನ ಕೆಲಸವಾಗುವುದಕ್ಕೆ ಶಾಸಕರೊಬ್ಬರಿಗೆ 1 ಕೋಟಿ ರೂಪಾಯಿ ಹಣ ನೀಡಿದ್ದ ಉದ್ಯಮಿ ಜೂ.30 ರಂದು ವಿಧಾನಸೌಧದ ಗೇಟ್ ಮುಂಭಾಗದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. 
ಮುಖ್ಯಮಂತ್ರಿಗಳನ್ನು ಭೇಟಿ ಮಾಡುವುದಕ್ಕಾಗಿ ಕೆಂಗಲ್ ಹನುಮಂತಯ್ಯ ಗೇಟ್ ಬಳಿ ಕಾರು ನಿಲ್ಲಿಸಿ ಕಾಯುತ್ತಿದ್ದ ಉದ್ಯಮಿ ಏಕಾಏಕಿ ವಿಷ ಸೇವನೆ ಮಾಡುತ್ತಿರುವುದನ್ನು ಗಮನಿಸಿರುವ ಪಾದಚಾರಿಗಳು ಉದ್ಯಮಿಯನ್ನು ತಕ್ಷಣವೇ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಿದ್ದಾರೆ.  " ಮಧ್ಯಾಹ್ನ 12.15 ರ ವೇಳೆಗೆ ಉದ್ಯಮಿ ಗಂಗಾಧರ್ (38) ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಕೆಂಗಲ್ ಹನುಮಂತಯ್ಯ ಗೇಟ್ ಬಳಿ ಕಾಯುತ್ತಿದ್ದರು. ಈ ನಡುವೆ ಏಕಾಏಕಿ ವಿಷ ಸೇವಿಸುತ್ತಿದ್ದುದ್ದನ್ನು ಸ್ಥಳೀಯರು ಗಮನಿಸಿದ್ದಾರೆ, ಆತ್ಮಹತ್ಯೆಗೆ ಯತ್ನಿಸಿದ ಉದ್ಯಮಿಯನ್ನು ಆಸ್ಪತ್ರೆ ದಾಖಲಿಸಲಾಗಿದ್ದು ಆತನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ.  
ಉದ್ಯಮಿ ತನ್ನ ಕೆಲಸ ಮಾಡಿಕೊಡಲು ಎಂಎಲ್ಎ ಒಬ್ಬರಿಗೆ 1 ಕೋಟಿ ರೂಪಾಯಿ ನೀಡಿದ್ದರು ಆದರೆ ಕೆಲಸ ಮಾಡಿಕೊಡಲು ಶಾಸಕ ವಿಫಲನಾಗಿದ್ದರಿಂದ ಆತ ಉದ್ಯಮಿಯನ್ನು ಭೇಟಿ ಮಾಡಲು ಹಿಂದೇಟು ಹಾಕುತ್ತಿದ್ದ ಅಷ್ಟೇ ಅಲ್ಲದೇ ಉದ್ಯಮಿಯ ಹಣವನ್ನೂ ವಾಪಸ್ ನೀಡಿರಲಿಲ್ಲ, ಇದರಿಂದ ಮನನೊಂದು ಉದ್ಯಮಿ ಆತ್ಮಹತ್ಯೆಗೆ ಯತ್ನಿಸಿರುವುದು ಪ್ರಾಥಮಿಕ ಹಂತದ ವಿಚಾರಣೆಯ ಮೂಲಕ ತಿಳಿದುಬಂದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.